ವಿಜಯಪುರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ವೃಂದಗಳ ಹುದ್ದೆಗಳನ್ನು ಗುತ್ತಿಗೆ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರ, ಸೋಷಿಯಲ್ ವರ್ಕರ್ (ಎನ್.ಎಂ.ಎಚ್.ಪಿ), ಆಡಿಯೋಲಾಜಿಸ್ಟ್/ಸ್ಫೀಚ್‌ಥೆರಪಿಸ್ಟ್, ಶುಶ್ರೂಷಣಾಧಿಕಾರಿ, ಕಿರಿಯ ಪ್ರಯೋಗಶಾಲಾ ತಂತ್ರಜ್ಞರು, ನೇತ್ರ ಸಹಾಯಕರು, ಟೆಂಟಲ್ ಹೈಜಿನಿಸ್ಟ್, ಆಡಿಯೋಮೆಟ್ರಿಕ್ ಅಸಿಸ್ಟಂಟ್, ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನಿಗದಿತ ಅರ್ಜಿ ನಮೂನೆಗಳನ್ನು NIC Website : http://vijayapura.nic.in ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ದಿನಾಂಕ : ೦೬-೧೧-೨೦೨೩ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಹಳೇ ಆಸ್ಪತ್ರೆ ಆವರಣ, ಶಿವಾಜಿ ವೃತ್ತ, ಅಥಣಿ ರಸ್ತೆ, ವಿಜಯಪುರ ವಿಳಾಸಕ್ಕೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment