ಕೊಲ್ಹಾರ: ರಾಜ್ಯದ ಹಾಗೂ ರೈತರ ಹಿತ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಬಿಜೆಪಿ ಸಂಸದ ನಳಿನಕುಮಾರ ಕಟೀಲ್ ಹರಿಹಾಯ್ದರು.
ಶನಿವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಬರ ಅಧ್ಯಯನ ಸಂದರ್ಭ ಬ.ಬಾಗೇವಾಡಿ ತಾಲೂಕಿನ ವಿವಿಧ ರೈತರ ಹೊಲಗಳಿಗೆ ತೆರಳಿ ಪರಿಶೀಲನೆ ನಡೆಸಿ ಕೊಲ್ಹಾರ ಪಟ್ಟಣದ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳನ್ನು ಪರಿಶೀಲನೆ ನಡೆಸಿದ್ದೆವೆ ಬರಗಾಲದಿಂದ ಸಂಪೂರ್ಣ ಬೆಳೆಗಳು ಹಾನಿಯಾಗಿವೆ. ಇಂತಹ ಸಂದರ್ಭದಲ್ಲಿ ಪರಿಹಾರ ನೀಡಿ ರೈತರಿಗೆ ಆತ್ಮಸ್ಥೈರ್ಯ ತುಂಬಬೇಕಾದ ರಾಜ್ಯದ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು.
ಸಿದ್ದರಾಮಯ್ಯನವರ ಸರಕಾರ ಸಮರ್ಪಕವಾಗಿ ವಿದ್ಯುತ್ ನೀಡದ ಕಾರಣ ಪೂರ್ಣ ಪ್ರಮಾಣದಲ್ಲಿ ಫಸಲು ಬರದೇ ಬೆಳೆಗಳು ಒಣಗಿ ಹೋಗಿವೆ. ಸರ್ಕಾರ ರೈತರಿಗೆ ವಿದ್ಯುತ್ ನೀಡಿದ್ದರೆ ರೈತಾಪಿ ವರ್ಗ ತಮ್ಮ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುತ್ತಿದ್ದರು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂದು ಗುಡುಗಿದರು.
ಸಿದ್ದರಾಮಯ್ಯನವರು ತಮ್ಮ ಸರ್ಕಾರ ಭದ್ರ ಪಡಿಸಿಕೊಳ್ಳಲು ಶಾಸಕರ, ಸಚಿವರ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ತಮ್ಮ ಸರ್ಕಾರ ಉಳಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದ್ದಾರೆಯೇ ಹೊರತು ರೈತರ ಹಾಗೂ ರಾಜ್ಯದ ಹಿತ ಕಾಪಾಡುವ ಬಗ್ಗೆ ಚಿಂತನೆ ನಡೆಸುತ್ತಿಲ್ಲ ಎಂದರು. ಈ ಹಿಂದೆ ನಮ್ಮ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕೇಂದ್ರ ಸರ್ಕಾರದ ಪರಿಹಾರಕ್ಕೆ ಕಾಯದೆ ರಾಜ್ಯದ ರೈತರಿಗೆ ಪರಿಹಾರ ಕೊಟ್ಟಿದ್ದನ್ನು ಸ್ಮರಿಸಿಕೊಂಡು ಯಡಿಯೂರಪ್ಪನವರ ರೀತಿಯೇ ಸಿದ್ದರಾಮಯ್ಯನವರು ರಾಜ್ಯದ ರೈತರಿಗೆ ಸಮರ್ಪಕ ಪರಿಹಾರ ಒದಗಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಪಿ.ಸಿ ಗದ್ದಿಗೌಡರ, ಶಾಸಕ ಸಿದ್ದು ಸವದಿ, ಜಗದೀಶ ಗುಡಗುಂಟಿ, ಹೆಚ್.ಆರ್ ನಿರಾಣಿ, ಮಾಚಿ ಸಚಿವ ಮುರುಗೇಶ್ ನಿರಾಣಿ, ಎಸ್.ಕೆ ಬೆಳ್ಳುಬ್ಬಿ, ರಮೇಶ್ ಭೂಸನೂರ, ವಿಜುಗೌಡ ಪಾಟೀಲ್, ಚಂದ್ರಶೇಖರ ಕವಟಗಿ, ಜಿಲ್ಲಾಧ್ಯಕ್ಷ ಆರ್.ಎಸ್ ಪಾಟೀಲ್ (ಕೂಚಬಾಳ), ಶಾಂತಗೌಡ ಪಾಟೀಲ್, ಬಸವಾಜ ಯಂಕಂಚಿ, ಸಿ.ಎಂ ಗಣಕುಮಾರ ಹಾಗೂ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

