ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ೨೦೨೬-೨೭ನೇ ಸಾಲಿನ ಮೌಲಾನಾ ಅಬುಲ್ ಕಲಾಂ ಆಜಾದ್ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಪಾರ್ಸಿ ಹಾಗೂ ಬೌದ್ಧ ಸಮುದಾಯದ ವಿದ್ಯಾರ್ಥಿಗಳು ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತರು ನ.೩೦ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ ೦೮೩೫೨-೨೯೫೫೨೩, ಜಿಲ್ಲಾ ಮಾಹಿತಿ ಕೇಂದ್ರ ವಿಜಯಪುರ ೮೧೨೩೭೧೦೭೬೬, ಮುದ್ದೇಬಿಹಾಳ ೮೭೨೨೪೪೫೫೫೨, ಬಸವನಬಾಗೇವಾಡಿ ೯೯೭೨೩೪೦೭೨೧, ಸಿಂದಗಿ.೯೦೩೫೫೫೮೬೦೯, ಹಾಗೂ ಇಂಡಿ ೯೯೦೦೧೦೯೭೫೯ ಈ ಕೇಂದ್ರಗಳಲ್ಲಿಯೂ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
