ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿಗೆ ಬಿ.ಎಸ್ಸಿ ನರ್ಸಿಂಗ್ ಹಾಗೂ ಜಿಎನ್ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಡಿ.೩೧ರೊಳಗೆ “ಸೇವಾಒನ್” hಣಣಠಿs://sevಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ/seಡಿviಛಿes/ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೯೫೫೨೩ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
