ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ರಜಿಸ್ಟ್ರಾರ ಡಾ. ರಾಘವೇಂದ್ರ ವಿ. ಕುಲಕರ್ಣಿ ಮತ್ತು ಸಮುದಾಯ ವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಶೈಲಜಾ ಪಾಟೀಲ ಅವರಿಗೆ ರಾಜ್ಯ ಸರಕಾರದ ಪ್ರತಿಷ್ಠಿತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಫೆಲೋ ಗೌರವ ಲಭಿಸಿದೆ.
ಡಾ. ರಾಘವೇಂದ್ರ ಕುಲಕರ್ಣಿ ಅವರಿಗೆ 2025ನೇ ವರ್ಷದ ಅಕಾಡೆಮಿ ಫೆಲೋ ಗೌರವ ಸಂದಿದೆ. ಅವರು ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಕ್ಯಾನ್ಸರ್ಗೆ ಪಾಲಿಮರ್ ಆಧಾರಿತ ಔಷಧ ಸಂಶೋಧಕರಾಗಿದ್ದಾರೆ. ಇವರು 2021 ರಿಂದ ಸತತ ಐದು ವರ್ಷಗಳ ಕಾಲ “ವಿಶ್ವದ ಉನ್ನತ 2% ವಿಜ್ಞಾನಿಗಳ” ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಡಾ. ಶೈಲಜಾ ಪಾಟೀಲ ಅವರಿಗೆ 2024 ನೇ ವರ್ಷದ ಅಕಾಡೆಮಿ ಫೆಲೋ ಗೌರವ ಲಭಿಸಿದೆ. ಅವರು ಸಾರ್ವಜನಿಕ ಆರೋಗ್ಯ ಪೋಷಣೆ, ತಾಯಿ ಮತ್ತು ಮಗುವಿನ ಆರೋಗ್ಯ, ಸಾಂಕ್ರಾಮಿಕವಲ್ಲದ ರೋಗಗಳು ಮತ್ತು ಪರಿಸರ ಆರೋಗ್ಯ ಕ್ಷೇತ್ರಗಳಲ್ಲಿ ಸಂಶೋಧಕರಾಗಿದ್ದಾರೆ. ಇವರು 2016 ನೇ ಸಾಲಿನ ಕರ್ನಾಟಕ ಸರ್ಕಾರದ ಕಲ್ಪನಾ ಚಾವ್ಲಾ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಪ್ರಾಧ್ಯಾಪಕರ ಈ ಸಾಧನೆಗೆ ಬಿಎಲ್ಡಿಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಕುಲಾಧಿಪತಿ ಬಿ. ಎಂ. ಪಾಟೀಲ, ಸಮಕುಲಾಧಿಪತಿ ಪ್ರೊ. ವೈ. ಎಂ. ಜಯರಾಜ ಹಾಗೂ ಕುಲಪತಿ ಪ್ರೊ. ಅರುಣ ಇನಾಮದಾರ ಅಭಿನಂದನೆ ಸಲ್ಲಿಸಿದ್ದಾರೆ.

