Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ವಂ ಎಐ ಸಂಸ್ಥೆಯೊಂದಿಗೆ ಬಿಎಲ್ಡಿಇ ಸಂಸ್ಥೆ ಮಹತ್ವದ ಒಪ್ಪಂದ

“ಸಿರಿಗನ್ನಡ ಸಾಧಕ” ಪ್ರಶಸ್ತಿಗೆ ಬಿ ಜಿ ಚಿಮ್ಮಲಗಿ ಆಯ್ಕೆ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವಂ ಎಐ ಸಂಸ್ಥೆಯೊಂದಿಗೆ ಬಿಎಲ್ಡಿಇ ಸಂಸ್ಥೆ ಮಹತ್ವದ ಒಪ್ಪಂದ
(ರಾಜ್ಯ ) ಜಿಲ್ಲೆ

ಸರ್ವಂ ಎಐ ಸಂಸ್ಥೆಯೊಂದಿಗೆ ಬಿಎಲ್ಡಿಇ ಸಂಸ್ಥೆ ಮಹತ್ವದ ಒಪ್ಪಂದ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕೃತಕ ಬುದ್ಧಿಮತ್ತೆ ಸಾಮರ್ಥ್ಯ ಕೇಂದ್ರ ಸ್ಥಾಪನೆಗೆ ಒಪ್ಪಂದ | ಉತ್ತರ ಕರ್ನಾಟಕವನ್ನು ಕೃತಕ ಬುದ್ಧಿಮತ್ತೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ಸ್ಟಾರ್ಟ್‌ಅಪ್‌ಗಳ ಕೇಂದ್ರವನ್ನಾಗಿಸುವತ್ತ ಮಹತ್ವದ ಹೆಜ್ಜೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಉತ್ತರ ಕರ್ನಾಟಕದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ಶಿಕ್ಷಣ, ತಂತ್ರಜ್ಞಾನ ಮತ್ತು ನಾವೀನ್ಯತೆಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿ ವಿಜಯಪುರ ನಗರದ ಬಿ.ಎಲ್‌.ಡಿ.ಇ ಸಂಸ್ಥೆಯು ಬೆಂಗಳೂರಿನ ಸರ್ವಂ ಎಐ (Sarvam AI) ಸಂಸ್ಥೆಯೊಂದಿಗೆ ಮಹತ್ವದ ಒಡಂಬಡಿಕೆ (MoU) ಮಾಡಿಕೊಂಡಿದೆ. ಬಿಎಲ್‌ಡಿಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದಲ್ಲಿ (BLDEACET) ಕೃತಕ ಬುದ್ಧಿಮತ್ತೆ ಸಾಮರ್ಥ್ಯ ಕೇಂದ್ರ (AI Capability Centre) ಸ್ಥಾಪಿಸುವ ಉದ್ದೇಶದಿಂದ ಈ ಒಪ್ಪಂದ ಮಾಡಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಶೃಂಗಸಭೆ–2026ರಲ್ಲಿ ಇಂದು ಗುರುವಾರ ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹಾಗೂ ಸರ್ವಂ ಎಐ ಸಂಸ್ಥೆಯ ಸಹ-ಸಂಸ್ಥಾಪಕ ವಿವೇಕ್ ರಾಘವನ್ ಅವರು ರಾಜ್ಯ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಸಮ್ಮುಖದಲ್ಲಿ ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.
ಈ ಕೇಂದ್ರ ಸ್ಥಾಪಿಸುವ ಮೂಲಕ ಬಿ.ಎಲ್‌.ಡಿ.ಇ ಸಂಸ್ಥೆಯ ನಾನಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಮಾತ್ರವಲ್ಲದೆ, ವಿಜಯಪುರ ಹಾಗೂ ಉತ್ತರ ಕರ್ನಾಟಕದ ನಾನಾ ಭಾಗಗಳ ವಿದ್ಯಾರ್ಥಿಗಳಿಗೂ ಕೃತಕ ಬುದ್ಧಿಮತ್ತೆ (AI), ಯಂತ್ರ ಕಲಿಕೆ (Machine Learning) ಹಾಗೂ ಜನರೇಟಿವ್ ಎಐ (Generative AI) ಕ್ಷೇತ್ರಗಳಲ್ಲಿ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ.
ಸರ್ವಂ ಎಐ ತಜ್ಞರ ಸಹಯೋಗದಲ್ಲಿ ಉದ್ಯಮ ಆಧಾರಿತ ತರಬೇತಿ, ಪ್ರಾಯೋಗಿಕ ಕಲಿಕೆ, ನಾನಾ ಯೋಜನೆಗಳು, ಇಂಟರ್ನ್‌ಶಿಪ್ ಹಾಗೂ ಪ್ರಮಾಣಪತ್ರ ಕೋರ್ಸ್‌ಗಳನ್ನು ಒದಗಿಸಲಾಗುವುದು. ಅಲ್ಲದೆ, ವಿದ್ಯಾರ್ಥಿ ಸ್ಟಾರ್ಟ್‌ಅಪ್‌ಗಳು, ಯುವ ಉದ್ಯಮಿಗಳು ಮತ್ತು ನವೋದ್ಯಮಿಗಳಿಗೆ ಮಾರ್ಗದರ್ಶನ ಹಾಗೂ ಅಗತ್ಯ ಸಹಕಾರ ನೀಡುವ ಮೂಲಕ ಎಐ ಆಧಾರಿತ ಉತ್ಪನ್ನಗಳು ಮತ್ತು ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸಲಾಗುವುದು. ಬೆಂಗಳೂರು ಮತ್ತು ಎರಡನೇ ಹಂತದ ನಗರಗಳ ನಡುವಿನ ತಂತ್ರಜ್ಞಾನ ಹಾಗೂ ಕೌಶಲ್ಯದ ಅಂತರವನ್ನು ಕಡಿಮೆ ಮಾಡಿ, ಉತ್ತರ ಕರ್ನಾಟಕದಲ್ಲಿಯೇ ಪ್ರತಿಭಾವಂತ ಯುವಜನರಿಗೆ ಹೊಸ ಉದ್ಯೋಗ ಮತ್ತು ಉದ್ಯಮಶೀಲತೆಯ ಅವಕಾಶಗಳನ್ನು ಸೃಷ್ಟಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ, ಇಂಥ ಕೇಂದ್ರಗಳು ಉತ್ತರ ಕರ್ನಾಟಕದ ಯುವಜನರಿಗೆ ಕೃತಕ ಬುದ್ಧಿಮತ್ತೆಯ ಹೊಸ ಯುಗದಲ್ಲಿ ಮುಂಚೂಣಿಗೆ ಬರಲು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ನೆರವಾಗಲಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಎಲ್‌ಡಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಅವರು ಮಾತನಾಡಿ, ವಿಜಯಪುರ ಜಿಲ್ಲೆಯನ್ನು ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ, ನಾವೀನ್ಯತೆ ಮತ್ತು ಸ್ಟಾರ್ಟ್‌ಅಪ್‌ಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ಸಂಸ್ಥೆ ಬದ್ಧವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್‌.ಡಿ.ಇ.ಎ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪಿ. ಮಂಜುನಾಥ, ಎಐ ಸಾಮರ್ಥ್ಯ ಕೇಂದ್ರದ ಅಧ್ಯಕ್ಷ ಡಾ. ಆರ್. ಪಿ. ಬಿ. ಕೋಟ್ನಾಳ, ಸದಸ್ಯ ಕಾರ್ಯದರ್ಶಿ ಡಾ. ಪ್ರದೀಪ ವಿ. ಮಲಾಜಿ, ಎಂಜಿನಿಯರಿಂಗ್ ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ಸರ್ವಂ ಎಐ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಈ ಒಡಂಬಡಿಕೆಯು ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ಕಲಿಕೆ, ಉದ್ಯಮ ಸಹಯೋಗ ಮತ್ತು ನವೋದ್ಯಮ ಅವಕಾಶಗಳನ್ನು ತಮ್ಮ ನೆಲದಲ್ಲಿಯೇ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ಸಿರಿಗನ್ನಡ ಸಾಧಕ” ಪ್ರಶಸ್ತಿಗೆ ಬಿ ಜಿ ಚಿಮ್ಮಲಗಿ ಆಯ್ಕೆ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕರವೇ ಆಗ್ರಹ

ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಗೆ ತೆರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ವಂ ಎಐ ಸಂಸ್ಥೆಯೊಂದಿಗೆ ಬಿಎಲ್ಡಿಇ ಸಂಸ್ಥೆ ಮಹತ್ವದ ಒಪ್ಪಂದ
    In (ರಾಜ್ಯ ) ಜಿಲ್ಲೆ
  • “ಸಿರಿಗನ್ನಡ ಸಾಧಕ” ಪ್ರಶಸ್ತಿಗೆ ಬಿ ಜಿ ಚಿಮ್ಮಲಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಗೆ ತೆರೆ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸ್ಪರ್ಧೆಗಳು ಪ್ರತಿಭೆ ಅನಾವರಣಕ್ಕೆ ವೇದಿಕೆ :ಕಲಾದಗಿ
    In (ರಾಜ್ಯ ) ಜಿಲ್ಲೆ
  • ಡಾ.ರಾಘವೇಂದ್ರ & ಡಾ. ಶೈಲಜಾ ಗೆ ಅಕಾಡೆಮಿ ಫೆಲೋ ಗೌರವ
    In (ರಾಜ್ಯ ) ಜಿಲ್ಲೆ
  • ನರ್ಸಿಂಗ್ ವಿದ್ಯಾರ್ಥಿಗಳ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಸೇರ್ಪಡೆ ಹೋರಾಟಕ್ಕೆ ಮಹಿಳಾ ಮಂಡಳ ಬೆಂಬಲ
    In (ರಾಜ್ಯ ) ಜಿಲ್ಲೆ
  • ನ.೩೦ರೊಳಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.