ವಿಜಯಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದಲ್ಲಿ ಯೋಗ
ಉಚಿತ ಶಿಬಿರ
ವಿಜಯಪುರ: ದಿನಂಪ್ರತಿ ಮಾಡುವ ಯೋಗದ ಅನುಷ್ಠಾನ ನಮ್ಮ ದೇಹ, ಮನಸ್ಸು ಹಾಗೂ ಭಾವನೆಗಳನ್ನು ಆರೋಗ್ಯವಾಗಿರಿಸಿ ವಿಶ್ರಾಂತಿ, ರೋಗ ನಿರೋಧಕ ಶಕ್ತಿ, ಏಕಾಗ್ರತೆ, ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಅಂತರಾಷ್ಟ್ರೀಯ ವಿಪಸ್ಸನ ಸಾಧಕ ಯೋಗ ಗುರು ಎಂ.ಪಿ.ದೊಡಮನಿಯವರು ಹೇಳಿದರು.
ಶನಿವಾರದಂದು ವಿಜಯಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಜಿಯವರ ಗುರು ನಮನ ಕಾರ್ಯಕ್ರಮದ ನಿಮಿತ್ಯವಾಗಿ ‘ಯೋಗಾಸನ ಪ್ರಾಣಾಯಾಮ ಮತ್ತು ಧ್ಯಾನ ತರಬೇತಿ’ ಶಿಬಿರ ಕಾರ್ಯಾಕ್ರಮದಲ್ಲಿ ವಿದ್ಯಾರ್ಥಿಗಳಿಗೆ “ಉಚಿತ ಧ್ಯಾನ ಮತ್ತು ಯೋಗ” ತರಬೇತಿಯನ್ನು ನೀಡಿ ಮಾತನಾಡಿದ ಅವರು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಆಹಾರ ಮತ್ತು ವ್ಯಾಯಾಮ ಹೆಚ್ಚು ಉಪಕಾರಿ. ಇನ್ನು ಮಕ್ಕಳಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಹೆಚ್ಚು ಸೂಕ್ತ. ಹಾಗಾಗಿ ನಾವಿಲ್ಲಿ ಯಾವೆಲ್ಲಾ ಆಸನಗಳನ್ನು ಮಾಡಿದರೆ ಮಕ್ಕಳ ಮತ್ತು ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಹೇಳಿದರು.
ಈ ವೇಳೆಯಲ್ಲಿ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಮಾತನಾಡಿದರು.
ಈ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸಂದೀಪ ರಾಠೋಡ, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಬಿ.ಪೂಜಾರಿ ಸೇರಿದಂತೆ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.