ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ತಾಲೂಕಿನ ಹಳ್ಳದಗೆಣ್ಣೂರ ಗ್ರಾಮದ ನ್ಯಾಯವಾದಿ ಮಹ್ಮದಗೌಸ ಹವಾಲ್ದಾರ ಅವರಿಗೆ ಸ್ವರ್ಣ ಭಾರತ ಫೌಂಡೇಶನ್, ಬೆಂಗಳೂರು ವತಿಯಿಂದ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.
ನವೆಂಬರ್ 22ರಂದು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಸಂದ ಈ ಪ್ರಶಸ್ತಿಯು ಅವರ ಸಾಧನೆಗೆ ಮತ್ತೊಂದು ಗೌರವದ ಗರಿ ಮೂಡಿಸಿದೆ.

