Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

‘ಬಸವ ಮಂಟಪ’ ಲೇಖಕ & ಪ್ರಕಾಶಕರ ವಿರುದ್ಧ ಎಫ್ಐಆರ್ ದಾಖಲು!

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ

ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಯಲ್ಲಿ ನಡೆದ ಮೂರು ದಿನಗಳ ಅಂತರಶಾಲಾ ಕ್ರೀಡಾಕೂಟ ಶುಕ್ರವಾರ ಮುಕ್ತಾಯವಾಯಿತು.
ವಿಜಯಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಾನಾ ಶಿಕ್ಷಣ ಸಂಸ್ಥೆಗಳ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲಾ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಬಾಸ್ಕೆಟ್‌ಬಾಲ್, ಥ್ರೋಬಾಲ್, ಫುಟ್‌ಬಾಲ್ ಹಾಗೂ ಕ್ರಿಕೆಟ್ ಪಂದ್ಯಗಳು ಈ ಕ್ರೀಡಾಕೂಟದಲ್ಲಿ ನಡೆದವು.
ಸಮಾರೋಪ ಸಮಾರಂಭದಲ್ಲಿ ಪಾಲ್ಗೋಂಡ ಅಂತಾರಾಷ್ಟ್ರೀಯ ಯೋಗ ತರಬೇತುದಾರ ಮಡಿವಾಳಪ್ಪ ದೊಡಮನಿ, ಬಿ.ಎಲ್.ಡಿ.ಇ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಎಸ್. ಕೋರಿ, ಶಾಲೆಯ ಪ್ರಭಾರಿ ಪ್ರಾಚಾರ್ಯೆ ವಸುಧಾ ನಾರ್ವೇಕರ ಹಾಗೂ ಹಿರಿಯ ಸಂಯೋಜಕಿ ದೀಪಾ ಜಂಬೂರೆ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಮಡಿವಾಳಪ್ಪ ದೊಡಮನಿ ಮಾತನಾಡಿ, ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಮಹತ್ವದ್ದಾಗಿದೆ. ತರಬೇತುದಾರರ ಸೂಕ್ತ ಮಾರ್ಗದರ್ಶನ, ತಂತ್ರಗಾರಿಕೆ ಹಾಗೂ ತರಬೇತಿಯು ಸ್ಪರ್ಧಾಳುಗಳನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲೆಯ ಪ್ರಭಾರ ಪ್ರಾಚಾರ್ಯೆ ವಸುಧಾ ನಾರ್ವೇಕರ ಮಾತನಾಡಿ, ಕ್ರೀಡೆಯಲ್ಲಿ ಗೆಲುವು ಸಾಧನೆಯ ಸಂಕೇತವಾದರೆ, ಸೋಲು ಮುಂದಿನ ಯಶಸ್ಸಿಗೆ ದಾರಿದೀಪವಾಗಿದೆ. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ, ಶಿಸ್ತು, ಸಹನೆ, ಪರಸ್ಪರ ಗೌರವ ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸುತ್ತವೆ. ಗೆದ್ದಾಗ ಅತಿಯಾಗಿ ಸಂಭ್ರಮಿಸದೆ, ಸೋತಾಗ ಎದೆಗುಂದದೆ ಮುಂದಿನ ಸಾಧನೆಯತ್ತ ಸಾಗಬೇಕು ಎಂದು ಹೇಳಿದರು.
ಶಾಲೆಯ ಹಿರಿಯ ಸಂಯೋಜಕಿ ದೀಪಾ ಜಂಬೂರೆ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಉತ್ತಮ ಆರೋಗ್ಯವನ್ನು ಹೊಂದಲು ಪ್ರೋತ್ಸಾಹ ನೀಡುತ್ತವೆ ಎಂದು ಹೇಳಿದರು.
ಶೋಭಾ ಬಗಲಿ ಮತ್ತು ಅರುಣಾ ಹೊನವಾಡ ನಿರೂಪಿಸಿದರು. ಮೀರ್ ದಾದಾ ನೂರೆನ್ ಸ್ವಾಗತಿಸಿದರು. ಪ್ರೀತಿ ಪವಾರ ವಂದಿಸಿದರು.
ಶಾಲೆಯ ಮುಖ್ಯ ದೈಹಿಕ ಶಿಕ್ಷಕ ಸ್ಯಾಮಸನ್ ಸೌಜಾ, ದೈಹಿಕ ಶಿಕ್ಷಕರಾದ ಸುನೀತಾ ಪತ್ತಾರ ಮತ್ತು ಸಂಗಪ್ಪ ಅಲಮೇಲ, ಶಾಲೆ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪಂದ್ಯಾವಳಿಯಲ್ಲಿ ವಿಜೇತ ತಂಡಗಳ ವಿವರ

ಬಾಸ್ಕೆಟ್‌ಬಾಲ್ ಬಾಲಕಿಯರ ವಿಭಾಗ: ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್ ಸ್ಕೂಲ್(ಸಿ.ಬಿ.ಎಸ್.ಸಿ) ವಿಜಯಪುರ ಪ್ರಥಮ ಸ್ಥಾನ, ಲೊಯೋಲ ಪಬ್ಲಿಕ್ ಸ್ಕೂಲ್(ಸಿ.ಬಿ.ಎಸ್.ಸಿ) ಸಿಂದಗಿ ದ್ವಿತೀಯ ಸ್ಥಾನ.
ಬಾಸ್ಕೆಟ್‌ಬಾಲ್ ಬಾಲಕರ ವಿಭಾಗ: ಲೊಯೋಲ ಪಬ್ಲಿಕ್ ಸ್ಕೂಲ್(ಸಿ.ಬಿ.ಎಸ್.ಸಿ) ಸಿಂದಗಿ ಪ್ರಥಮ ಸ್ಥಾನ, ಶ್ರೀ ಬಿ.ಎಂ. ಪಾಟೀಲ್ ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಸಿ) ವಿಜಯಪುರ ದ್ವಿತೀಯ ಸ್ಥಾನ.
ಥ್ರೋಬಾಲ್: ಶಾರದಾ ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಸಿ) ವಿಜಯಪುರ ಪ್ರಥಮ ಸ್ಥಾನ, ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಸಿ) ವಿಜಯಪುರ ದ್ವಿತೀಯ ಸ್ಥಾನ.
ಫುಟ್‌ಬಾಲ್: ತುಂಗಳ ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಸಿ) ವಿಜಯಪುರ ಪ್ರಥಮ ಸ್ಥಾನ, ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆ (ಸಿ.ಬಿ.ಎಸ್.ಸಿ) ಕವಲಗಿ ದ್ವಿತೀಯ ಸ್ಥಾನ.
ಕ್ರಿಕೆಟ್: ಶಾರದಾ ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಸಿ) ವಿಜಯಪುರ ಪ್ರಥಮ ಸ್ಥಾನ, ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್(ಸಿ.ಬಿ.ಎಸ್.ಇ) ದ್ವಿತೀಯ ಸ್ಥಾನ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ಬಸವ ಮಂಟಪ’ ಲೇಖಕ & ಪ್ರಕಾಶಕರ ವಿರುದ್ಧ ಎಫ್ಐಆರ್ ದಾಖಲು!

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ

ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ‘ಬಸವ ಮಂಟಪ’ ಲೇಖಕ & ಪ್ರಕಾಶಕರ ವಿರುದ್ಧ ಎಫ್ಐಆರ್ ದಾಖಲು!
    In (ರಾಜ್ಯ ) ಜಿಲ್ಲೆ
  • ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 22,2026
    In (ರಾಜ್ಯ ) ಜಿಲ್ಲೆ
  • ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.