Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ತೀವ್ರ ಖಂಡನೆ | ವಿರಕ್ತಮಠ ಹಾಗೂ ಬಸವಪರ ಸಂಘಟನೆಗಳಿಂದ ಮುಖ್ಯಮಂತ್ರಿ ಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಶ್ವಗುರು ಬಸವಣ್ಣನವರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಕುರಿತು ಲೇಖಕ ರವಿ ಹಂಜಿ ಅವರು ಅವಹೇಳನಕಾರಿ ಹಾಗೂ ಆಧಾರರಹಿತ ಹೇಳಿಕೆಗಳನ್ನು ಖಂಡಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಚಡಚಣ ತಾಲೂಕು ಘಟಕ, ವಿರಕ್ತಮಠ ಹಾಗೂ ಬಸವಪರ ಸಂಘಟನೆಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ಲೇಖಕ ರವಿ ಹಂಜಿ ವಿರುದ್ಧ ಘೋಷಣೆ ಕೂಗುತ್ತ ಬಸವೇಶ್ವರ ವೃತ್ತದಿಂದ ತಹಶೀಲದಾರ ಕಛೇರಿಯವರೆಗೆ ಪ್ರತಿಭಟನೆ ಮಾಡಲಾಯಿತು ನಂತರ ಚಡಚಣ ಉಪತಹಶೀಲ್ದಾರ ಆರ್.ಎಸ್.ಚವ್ಹಾಣ ಅವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಲು ಸಿದ್ಧಪಡಿಸಿರುವ ಸಂಘಟನೆಗಳು, ರವಿ ಹಂಜಿ ಅವರ ಹೇಳಿಕೆಗಳು ಮತ್ತು ಬರಹಗಳು ಬಸವಣ್ಣನವರ ಅನುಯಾಯಿಗಳು ಹಾಗೂ ವೀರಶೈವ ಲಿಂಗಾಯತ ಸಮುದಾಯದವರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಮಹಾಸಭೆ ಗೌರವಿಸುತ್ತದೆ. ಆದರೆ ಅಭಿವ್ಯಕ್ತಿ ಸ್ವಾತಂತ್ರ‍್ಯದ ಹೆಸರಿನಲ್ಲಿ ಬಸವಣ್ಣನವರನ್ನು ಕೊಲೆಗಡುಕ, ದರೋಡೆಕೋರ ಎಂದು ಬಿಂಬಿಸುವುದು ಹಾಗೂ ಬಿಜ್ಜಳನ ಖಜಾನೆಯನ್ನು ದುರುಪಯೋಗಪಡಿಸಿಕೊಂಡು ಶರಣ ದಾಸೋಹ ಮಾಡಿದರು ಎಂಬಂತಹ ಆರೋಪಗಳನ್ನು ಮಾಡುವುದು ಒಪ್ಪುವಂತಹದ್ದಲ್ಲ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಚಡಚಣ ತಾಲೂಕು ಘಟಕ ಆತಂಕ ವ್ಯಕ್ತಪಡಿಸಿವೆ.
ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ರವಿ ಹಂಜಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಒಳಗೊಂಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಪ್ರಚೋದನಕಾರಿ ಹೇಳಿಕೆಗಳ ಕುರಿತು ಸೂಕ್ತ ತನಿಖೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ವಿಶ್ವಗುರು ಬಸವಣ್ಣನವರ ತತ್ವ, ಆದರ್ಶ ಹಾಗೂ ಸಮಾಜ ಸುಧಾರಣೆಯ ಕೊಡುಗೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಚಡಚಣ ತಾಲೂಕು ಘಟಕ ಹಾಗೂ ಚಡಚಣದ ಬಸವಾಭಿಮಾನಿಗಳು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಷಡಕ್ಷರ ಮಹಾಸ್ವಾಮಿ, ಗುರು ಗುರುಪಾದೇಶ್ವರ ಶಿವಾಚಾರ್ಯರು ಹಿರೇಮಠ ಹಾವಿನಾಳ ಹತ್ತಳ್ಳಿ, ಸಂಗಮೇಶ ಅವಜಿ, ಮುರುಗೇಂದ್ರ ಸಿಂಪಿ, ದೇವೆಂದ್ರಪ್ಪಗೌಡ ಪಾಟೀಲ, ಬಾಬುಗೌಡ ಪಾಟೀಲ, ಮಹಾದೇವ ಬನಸೋಡೆ, ವಸಂತ ಭೈರಾಮಡಿ, ಮಲ್ಲಪ್ಪ ಕಟ್ಟಿಮನಿ, ಶಿವಾಜಿ ಬಾಮಣಿ, ಸೋಮು ಬಡಿಗೇರ, ವಿದ್ಯಾ ಕಲ್ಯಾಣಶೆಟ್ಟಿ, ತ್ರೀವೇಣಿ ಬಾಡನ, ಸುನಂದಾ ಸಿಂಪಿ, ರತ್ನಮ್ಮಾ ಭಂಡರಕವಠೆ, ವಿ.ಸಿ.ಬಾಡನ, ಎಮ್.ಎಸ್.ಕಂಬಾರ, ಬಿ.ಪಿ.ಅವಟಿ, ಎಸ್,ಎಮ್,ಅವಟಿ, ಸಿದ್ದರಾಮ ರಾವುತ, ಚಂದ್ರಶೇಖರ ಕಟ್ಟಿಮನಿ, ಜಕ್ಕಪ್ಪ ವಾಘಮೋರೆ ಸೇರಿದಂತೆ ಹಲವರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ

ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಸಂಯೋಜನಾ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶನಿದೇವರ ಸನ್ನಿಧಿಯಲ್ಲಿ ನಾಗದೇವತೆಯ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.