Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
(ರಾಜ್ಯ ) ಜಿಲ್ಲೆ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಲೆಗಳ ಮಾನ್ಯತೆ ನವೀಕರಣ- ರಸ್ತೆ ಕಾಮಗಾರಿಗಳಿಗೆ ವೇಗ ಹಾಗೂ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ವಸತಿ ನಿಲಯಗಳ ನಿರ್ವಹಣೆ, ರಸ್ತೆ ಅಭಿವೃದ್ಧಿ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಬಾಕಿ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋಲ್ಹಾರದತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್)ಯ ಹೆರಿಗೆ ಪ್ರಕರಣಗಳನ್ನು ವಿಜಯಪುರಕ್ಕೆ ರೆಫರ್ ಮಾಡುತ್ತಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ತುರ್ತು ಹಾಗೂ ಸಂಕೀರ್ಣ ಹೆರಿಗೆ ಪ್ರಕರಣಗಳಿದ್ದರೆ ಮಾತ್ರ ರೆಫರ್ ಮಾಡಬೇಕು. ಈ ಕುರಿತು ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಿ, ಪ್ರಕರಣಗಳನ್ನು ರೆಫರ್ ಮಾಡಲು ಕಾರಣವೇನು ಎಂಬ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲೆಯ ವಸತಿ ನಿಲಯಗಳ ವಸ್ತುಸ್ಥಿತಿಯ ವರದಿ ಸಲ್ಲಿಸಲು ಸೂಚಿಸಲಾಯಿತು. ಸರ್ಕಾರಿ ಆಸ್ತಿಗಳ ರಕ್ಷಣೆ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಾನೂನಾತ್ಮಕ ಸಮಸ್ಯೆಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿಗಳು ಮತ್ತು ಸಿಇಒ ಅಗತ್ಯ ಕಾನೂನು ಸಲಹೆಗಾರರನ್ನು ನೇಮಕ ಮಾಡುಕೊಳ್ಳುವಂತೆಯೂ, ಇಲಾಖೆಗಳ ಲೀಗಲ್ ಸೆಲ್‌ಗಳನ್ನು ಸಕ್ರಿಯಗೊಳಿಸಿ, ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು.
ಇದರಿಂದ ಕಾನೂನು ಸಂಬಂಧಿತ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅನುಕೂಲವಾಗಲಿದೆ ಎಂದರು.
ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ಲಾಗಿನ್ ಅಧಿಕಾರವನ್ನು ಸಿಇಒ ಅವರಿಗೆ ನೀಡುವ ಅದರ ಸಾಧಕ ಬಾಧಕಗಳ ಕುರಿತಾಗಿ ಸಭೆ ಸುದೀರ್ಘ ಚರ್ಚೆ ನಡೆಸಿತು. ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಅವರು ಕಾಲಕಾಲಕ್ಕೆ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಬೇಕು. ರಸ್ತೆಗಳ ಸುಧಾರಣೆಗೆ ಟೆಂಡರ್ ಕರೆದು ಕಾಮಗಾರಿಗಳಿಗೆ ವೇಗ ನೀಡಬೇಕು. ಟೆಂಡರ್ ಪ್ರಕ್ರಿಯೆ ಹಾಗೂ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ವಿವರ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಅಪ್ಪಾಜಿ ಸಿ.ಎಸ್ ನಾಡಗೌಡ,ಅಶೋಕ ಮನಗೂಳಿ, ಸುನೀಲಗೌಡ ಪಾಟೀಲ, ಶಾಸಕ ರಾಜುಗೌಡ ಪಾಟೀಲ,ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಸಿದ್ದಾಮಪ್ಪ ಹೊನಮೋಡೆ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಶಿವಣ್ಣ ಪಿ. ಕೋಟಾರಗಸ್ತಿ, ನೂರಅಹ್ಮದ ಅತ್ತಾರ, ಸತೀಶಕುಮಾರ ಅಡವಿ ಹಾಗೂ ಶ್ರೀಮತಿ ಪ್ರಿಯಾಂಕ ಚೇತನ ತೊರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ವಿಜಯಪುರ ಜಿಲ್ಲೆಯಲ್ಲಿ ಕಬ್ಬಿನ ತಾಕುಗಳಿಗೆ ಬೆಂಕಿ ತಗುಲುವ ಅವಘಡಗಳು ಸಂಭವಿಸುತ್ತಿರುವ ಬಗ್ಗೆ ಗಮನಹರಿಸಬೇಕು. ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಸಂಬಂಧಿಸಿದ ಇಲಾಖೆ ಕ್ರಮ ಕೈಗೊಳ್ಳಬೇಕು.ವಿದ್ಯುತ್ ಮಾರ್ಗಗಳ ದುರಸ್ತಿ ಮತ್ತು ನಿರ್ವಹಣೆಗೆ ಆದ್ಯತೆ ನೀಡಿ, ರೈತರಿಗೆ ಯಾವುದೇ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.”

– ಯಶವಂತರಾಯಗೌಡ ಪಾಟೀಲ
ಇಂಡಿ ಶಾಸಕರು

ಅಗತ್ಯ ವಿದ್ಯುತ್ ಪೂರೈಕೆಗೆ ಸರ್ಕಾರಕ್ಕೆ ಪ್ರಸ್ತಾವನೆ :ಶಾಸಕ ಶಿವಾನಂದ ಪಾಟೀಲ

ಜಿಲ್ಲೆಗೆ ಹಂಚಿಕೆಯಾಗಿರುವ ವಿದ್ಯುತ್ ಪ್ರಮಾಣ ಕಡಿಮೆಯಾಗಿದ್ದರೆ, ಅಗತ್ಯ ವಿದ್ಯುತ್ ಪೂರೈಕೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಎಂದು ಶಾಸಕ ಶಿವಾನಂದ ಪಾಟೀಲ ಅವರು ಇಂಧನ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಎಲ್ಲ ಅಧಿಕಾರಿಗಳು ಸಮನ್ವಯದಿಂದ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಶ್ರಮಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ತೊಗರಿ, ಹತ್ತಿ, ಮೆಕ್ಕೆಜೋಳ ಹಾಗೂ ಕಬ್ಬು ಹಾಗೂ ಇತರೆ ಬೆಳೆಗಳು ಸೇರಿದಂತೆ ಒಟ್ಟು ೫.೨೦ ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಕುರಿತು ಎನ್‌ಡಿ ಆರ್‌ಎಫ್ ಮಾರ್ಗಸೂಚನೆಯಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಹಿಂಗಾರು ಹಂಗಾಮಿನಲ್ಲಿಯೂ ಶೇ.೯೬ರಷ್ಟು ಮಳೆ ಕೊರತೆಯಿಂದ ಬಿತ್ತನೆಗೆ ಹಿನ್ನಡೆಯಾಗಿದ್ದು, ಜೋಳ, ಕಡಲೆ ಹಾಗೂ ಗೋಧಿ ಬೆಳೆಗಳು ತೇವಾಂಶ ಕೊರತೆಯಿಂದ ಬಾಡುತ್ತಿವೆ. ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ರಾಜ್ಯಮಟ್ಟದ ಸಭೆಗಳಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಮತ್ತು ಬೆಳೆ ಹಾನಿಯ ಕುರಿತು ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಅವರು ಸಭೆಗೆ ಮಾಹಿತಿ ನೀಡಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ

ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಸಂಯೋಜನಾ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶನಿದೇವರ ಸನ್ನಿಧಿಯಲ್ಲಿ ನಾಗದೇವತೆಯ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.