Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ
(ರಾಜ್ಯ ) ಜಿಲ್ಲೆ

ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್ಪಿ ಲಕ್ಷ್ಮಣ ನಿಂಬರಗಿ ಗೆ ಎಕ್ಸಲಂಟ್ ಸಂಸ್ಥೆಯಿಂದ ಸನ್ಮಾನಿಸಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಶ್ಲಾಘನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತವರು ಜಿಲ್ಲೆಯಲ್ಲಿ ಸೇವೆ ಮಾಡುವುದೇ ಪುಣ್ಯದ ಕೆಲಸ. ಅಂತದರಲ್ಲಿ ವಿಜಯಪುರದ ಬೆನಕನಹಳ್ಳಿಯಂತ ಕುಗ್ರಾಮದಲ್ಲಿ ಜನಿಸಿ ಯುಪಿಎಸ್‌ಸಿ ಪರೀಕ್ಷೆ ಪಾಸು ಮಾಡಿ ವಿಜಯಪುರ ಜಿಲ್ಲೆಯ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ ಕಳ್ಳ ಕಾಕರ ಪಾಲಿಗೆ ಸಿಂಹಸ್ವಪ್ನವಾಗಿ ಕಾಡಿದ ಲಕ್ಷ್ಮಣ ನಿಂಬರಗಿ ಅವರ ಕುರಿತು ಈ ಜಿಲ್ಲೆಯ ಪ್ರತಿಯೊಬ್ಬರಿಗೂ ಹೆಮ್ಮೆ ಇದೆ. ಅವರು ತವರು ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಸ್ಫೂರ್ತಿ ಚಿಲುಮೆಯಾಗಿದ್ದಾರೆ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.
ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ವರ್ಗಾವಣೆಯಾದ ಪ್ರಯುಕ್ತ ಎಕ್ಸಲಂಟ್ ಶಿಕ್ಷಣ ಸಂಸ್ಥೆ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ ಅವರು; ಇಂದಿನ ಯುವಕರಿಗೆ ಮಾದರಿಯಾಗಬಲ್ಲ ವ್ಯಕ್ತಿತ್ವ ಹೊಂದಿದ ಲಕ್ಷ್ಮಣ ನಿಂಬರಗಿ ಅವರ ಸೇವೆಯಿಂದ ನಮಗೆಲ್ಲ ಹರ್ಷವಾಗಿದೆ. ಇನ್ನೊಂದಿಷ್ಟು ದಿನಗಳ ಕಾಲ ಅವರ ಸೇವೆ ನಮ್ಮ ಜಿಲ್ಲೆಗೆ ದೊರಕಿದ್ದರೆ ಇನ್ನೂ ಸಂತೋಷವಾಗುತ್ತಿತ್ತು. ಅವರ ಕಾರ್ಯ ವೈಖರಿಯನ್ನು ಇಡೀ ಜಿಲ್ಲೆ ಕಣ್ಣಾರೆ ಕಂಡಿದೆ. ಅದರಲ್ಲೂ ಕಳ್ಳರ ಹಾವಳಿ ಇಡೀ ಜಿಲ್ಲೆಯನ್ನು ಆವರಿಸಿದ ಸಂದರ್ಭದಲ್ಲಿ ಅವರು ತೋರಿದ ಕಾರ್ಯಕ್ಷಮತೆಯೂ ಎಲ್ಲರ ಶ್ಲಾಘನೆಗೆ ಕಾರಣವಾಗಿತ್ತು. ಆಡಳಿತದಲ್ಲಿ ಸುಧಾರಣೆ ತರುವುದಕ್ಕಾಗಿ ಅವರು ಮಾಡಿದ ಕಾರ್ಯ ಅನುಪಮವಾದುದು. ಅದರಲ್ಲೂ ಸಂಚಾರ ದಟ್ಟಣೆಯಿಂದಾಗಿ ಆಗುತ್ತಿದ್ದ ಸಮಸ್ಯೆಯನ್ನು ಸರಿಪಡಿಸಲು ಅವರು ಕೈಗೊಂಡ ಕಾರ್ಯವನ್ನು ಇಂದಿಗೂ ಜನಗಳು ಸ್ಮರಿಸುತ್ತಾರೆ. ಎಐ ಆಧಾರಿತ ಕ್ಯಾಮರಾಗಳ ಅವಳಡಿಕೆ ಮಾಡುವುದರ ಮುಖಾಂತರ ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸುವಂತೆ ಮಾಡಿದ್ದಾರೆ. ಅಕ್ರಮ ಶಸ್ತ್ರಾಸ್ತ್ರಗಳ ಮೇಲೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಅವರ ಶೈಕ್ಷಣಿಕ ಸಾಧನೆಗಳು ನಮ್ಮ ಮಕ್ಕಳ ಮೇಲೆಯೂ ಗಣನೀಯವಾದ ಪರೀಣಾಮ ಬೀರಿದೆ. ಹಲವಾರು ಕಾರ್ಯಕ್ರಮಗಳಲ್ಲಿ ಅವರು ಮಕ್ಕಳ ಮಾರ್ಗದರ್ಶಕರಾಗಿದ್ದು ಇಂದಿಗೂ ಮಕ್ಕಳೂ ಸಹ ಅವರಂತೆ ಆಗಬೇಕು ಎನ್ನುವ ಕನಸು ಕಾಣುತ್ತಿರುವುದು ಇದಕ್ಕೆ ಉತ್ತಮ ನಿದರ್ಶನವಾಗಿದೆ ಎಂದು ಶುಭ ಹಾರೈಸಿದರು.
ವಿಡಿಸಿಸಿ ಬ್ಯಾಂಕ್ ನಿವೃತ್ತ ಕಾರ್ಯನಿರ್ವಾಹಕ ವಿ.ಡಿ.ಮಾದನಶೆಟ್ಟಿ, ಎಕ್ಸಲಂಟ್ ವಿಜ್ಞಾನ ಪ. ಪೂ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಜುನಗೊಂಡ, ಶೈಕ್ಷಣಿಕ ಸಂಯೋಜಕ ಮಂಜುನಾಥ ತುಮ್ಮರಮಟ್ಟಿ, ಲಕ್ಷ್ಮಣ ನಿಂಬರಗಿ ಅವರ ತಂದೆ ಬಸವರಾಜ ನಿಂಬರಗಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ

ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಸಂಯೋಜನಾ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶನಿದೇವರ ಸನ್ನಿಧಿಯಲ್ಲಿ ನಾಗದೇವತೆಯ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.