Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ

ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ; ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದ 25 ವಿಭಾಗಗಳಲ್ಲಿ ಪ್ರಶಸ್ತಿ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದ ವಿವಿಧ ವಿಭಾಗಗಳಲ್ಲಿ ನೀಡಲಾಗುವ ಪ್ರಶಸ್ತಿಗಳಿಗೆ 2025ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಪ್ರಕಟವಾದ ವರದಿ, ಲೇಖನ, ವಿಶೇಷ ವರದಿ ಹಾಗೂ ಸುದ್ದಿ ಛಾಯಾಚಿತ್ರಗಳನ್ನು ಸಲ್ಲಿಸಬಹುದು.
ಆಸಕ್ತ ಪತ್ರಕರ್ತರು ತಮ್ಮ ಸ್ವವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ನವೆಂಬರ್ 30, 2026ರೊಳಗೆ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆ.ಜಿ. ರಸ್ತೆ, ಬೆಂಗಳೂರು-09 ಈ ವಿಳಾಸಕ್ಕೆ ತಲುಪುವಂತೆ ಅರ್ಜಿ ಸಲ್ಲಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಮುದ್ರಣ ಮಾಧ್ಯಮ ವಿಭಾಗದ ಪ್ರಶಸ್ತಿಗಳು

  • ಜಿ. ನಾರಾಯಣಸ್ವಾಮಿ ಪ್ರಶಸ್ತಿ – ಅತ್ಯುತ್ತಮ ಗ್ರಾಮಾಂತರ ವರದಿ
  • ಪಟೇಲ್ ಭೈರಹನುಮಯ್ಯ ಪ್ರಶಸ್ತಿ – ಅತ್ಯುತ್ತಮ ಮಾನವೀಯ ವರದಿ
  • ಗಿರಿಧರ್ ಪ್ರಶಸ್ತಿ – ಅತ್ಯುತ್ತಮ ಅಪರಾಧ ವರದಿ
  • ಬಿ.ಎಸ್. ವೆಂಕಟರಾಂ ಪ್ರಶಸ್ತಿ – ಅತ್ಯುತ್ತಮ ಸ್ಕೂಪ್ ವರದಿ
  • ಕೆ.ಎ. ನೆಟ್ಟಕಲಪ್ಪ ಪ್ರಶಸ್ತಿ – ಅತ್ಯುತ್ತಮ ಕ್ರೀಡಾ ವರದಿ
  • ಖಾದ್ರಿ ಶಾಮಣ್ಣ ಪ್ರಶಸ್ತಿ – ಅತ್ಯುತ್ತಮ ರಾಜಕೀಯ ವಿಮರ್ಶೆ
  • ಮಂಗಳ ಎಂ.ಸಿ. ವರ್ಗಿಸ್ ಪ್ರಶಸ್ತಿ – ವಾರಪತ್ರಿಕೆಯಲ್ಲಿ ಚಿತ್ರ ಲೇಖನ
  • ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ – ರೈತಾಪಿ ಜನರ ಸಮಸ್ಯೆಗಳ ವರದಿ
  • ಆರ್.ಎಲ್. ವಾಸುದೇವರಾವ್ ಪ್ರಶಸ್ತಿ – ಅರಣ್ಯ ಕುರಿತ ಅತ್ಯುತ್ತಮ ವರದಿ
  • ಆರ್.ಎಲ್. ವಾಸುದೇವರಾವ್ ಪ್ರಶಸ್ತಿ – ವನ್ಯಪ್ರಾಣಿಗಳ ಕುರಿತ ಅತ್ಯುತ್ತಮ ವರದಿ
  • ಬಿ.ಜಿ. ತಿಮ್ಮಪ್ಪಯ್ಯ ಪ್ರಶಸ್ತಿ – ಆರ್ಥಿಕ ದುರ್ಬಲ ವರ್ಗದವರ ಕುರಿತ ವರದಿ
  • ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ – ಗ್ರಾಮೀಣ ಜನಜೀವನದ ಅತ್ಯುತ್ತಮ ವರದಿ
  • ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ – ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಕುರಿತ ವರದಿ
  • ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ – ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾದ ಕೃಷಿ ವರದಿ
  • ನಾಡಿಗೆರ ಕೃಷ್ಣರಾಯರ ಪ್ರಶಸ್ತಿ – ವಿಡಂಬನಾತ್ಮಕ ಲೇಖನ
  • ಅತ್ಯುತ್ತಮ ಪುಟ ವಿನ್ಯಾಸಗಾರರು – ಡೆಸ್ಕ್ ವಿಭಾಗ
  • ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿ
  • ಸುಣ್ಣವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ – ಅತ್ಯುತ್ತಮ ಸೇನಾ ವರದಿ
  • ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ – ಇಂಗ್ಲಿಷ್ ಪತ್ರಿಕೆಯ ವರದಿ
  • ಟಿ.ಕೆ. ಮಲಗೊಂಡ ಪ್ರಶಸ್ತಿ – ಅತ್ಯುತ್ತಮ ತನಿಖಾ ವರದಿ
  • ದ್ವಾರಕೀಶ್ ಸ್ಮಾರಕ ಪ್ರಶಸ್ತಿ – ಚಲನಚಿತ್ರ ವಿಮರ್ಶಾ ವರದಿ

ವಿದ್ಯುನ್ಮಾನ ಮಾಧ್ಯಮ (ಟಿವಿ) ವಿಭಾಗ

  • ಅತ್ಯುತ್ತಮ ರಾಜಕೀಯ ವರದಿ
  • ಅತ್ಯುತ್ತಮ ತನಿಖಾ ವರದಿ
  • ಅತ್ಯುತ್ತಮ ಸಾಮಾಜಿಕ ಮತ್ತು ಮಾನವೀಯ ವರದಿ
  • ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ

ಅರ್ಜಿ ಸಲ್ಲಿಸಲು ಪ್ರಮುಖ ಷರತ್ತುಗಳು

  • 2025ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಪ್ರಕಟವಾದ ವರದಿ, ಲೇಖನ ಅಥವಾ ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸಲ್ಲಿಸಬೇಕು.
  • ಯಾವ ಪ್ರಶಸ್ತಿಗೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬುದನ್ನು ಮುಖಪುಟದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಅನುವಾದಿತ ವರದಿ ಅಥವಾ ಲೇಖನಗಳನ್ನು ಪರಿಗಣಿಸುವುದಿಲ್ಲ.
  • ಒಬ್ಬರು ಗರಿಷ್ಠ ಮೂರು ಪ್ರಶಸ್ತಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು.
  • ವರದಿಗಳನ್ನು ಮೂರು ಪ್ರತಿಗಳಲ್ಲಿ ಸಲ್ಲಿಸಬೇಕು. ಜೆರಾಕ್ಸ್ ಪ್ರತಿಗಳಾಗಿದ್ದರೆ ದೃಢೀಕರಣ ಕಡ್ಡಾಯ.
  • ಟಿವಿ ವಿಭಾಗದ ಅರ್ಜಿಗೆ ವರದಿ ಪ್ರಸಾರವಾದ ಕ್ಲಿಪಿಂಗ್ (ಸಿಡಿ ಅಥವಾ ಪೆನ್‌ಡ್ರೈವ್) ಹಾಗೂ ಸ್ಕ್ರಿಪ್ಟ್‌ಗಳನ್ನು ಸಂಪಾದಕರ ದೃಢೀಕರಣದೊಂದಿಗೆ ಸಲ್ಲಿಸಬೇಕು.
  • ಕೆಯುಡಬ್ಲ್ಯೂಜೆ ಸದಸ್ಯತ್ವದ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಲಗತ್ತಿಸಬೇಕು.
  • ಸ್ವವಿವರ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು.
  • ಈಗಾಗಲೇ ಒಂದು ಬಾರಿ ನಿರ್ದಿಷ್ಟ ಪ್ರಶಸ್ತಿ ಪಡೆದವರು ಅದೇ ಪ್ರಶಸ್ತಿಗೆ ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ.
  • ಕೆಯುಡಬ್ಲ್ಯೂಜೆ ಪ್ರಶಸ್ತಿಯನ್ನು ಒಟ್ಟು ಎರಡು ಬಾರಿ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
  • ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರು ಈ ವಿಭಾಗದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ.
  • ರಾಜ್ಯ, ಜಿಲ್ಲಾ ಹಾಗೂ ತಾಲೂಕು ಸಂಘಗಳ ಪದಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
  • ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆಗೆ ಒಳಗಾದವರು ಅರ್ಜಿ ಸಲ್ಲಿಸುವಂತಿಲ್ಲ.
  • ನಿಗದಿತ ಮೂರು ಪ್ರಶಸ್ತಿಗಳ ಮಿತಿಯನ್ನು ಮೀರಿದ ಅರ್ಜಿಗಳನ್ನು ಹಾಗೂ ಷರತ್ತು ಉಲ್ಲಂಘಿಸಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
    ನಿಗದಿತ ಅವಧಿಯೊಳಗೆ ಎಲ್ಲ ಅರ್ಜಿಗಳು ಸಂಘದ ಕಚೇರಿಗೆ ತಲುಪುವಂತೆ ಕಳುಹಿಸಿಕೊಡಬೇಕು ಎಂದು ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ

ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 22,2026

ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 22,2026
    In (ರಾಜ್ಯ ) ಜಿಲ್ಲೆ
  • ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.