Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ

ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ
(ರಾಜ್ಯ ) ಜಿಲ್ಲೆ

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಮ್ಮೇಳನದ ಸಿದ್ಧತೆಗಳ ಕುರಿತು ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಾ.ಅಜಯ್ ಸಿಂಗ್ ರೊಂದಿಗೆ ಕೆಯುಡಬ್ಲ್ಯೂಜೆ ನಿಯೋಗ ಚರ್ಚೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನವನ್ನು ಯಶಸ್ವಿಯಾಗಿ ಹಾಗೂ ಅದ್ದೂರಿಯಾಗಿ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ತಿಳಿಸಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿಯೋಗವನ್ನು ಭೇಟಿಯಾದ ಸಚಿವರು, ಸಮ್ಮೇಳನದ ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಈ ಬಾರಿಯ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ರಾಯಚೂರಿನಲ್ಲಿ ಡಿಸೆಂಬರ್ ಅಥವ ಜನವರಿಯಲ್ಲಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗುವುದು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸಮಿತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ 31 ಜಿಲ್ಲೆಗಳಿಂದ ಪತ್ರಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಸಮ್ಮೇಳನದ ಯಶಸ್ಸಿಗೆ ಎಲ್ಲ ಜನಪ್ರತಿನಿಧಿಗಳ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಾಗಿದೆ. ಹೀಗಾಗಿ ತಾವು ಸಮ್ಮೇಳನದ ನೇತೃತ್ವ ವಹಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಡಾ. ಅಜಯ್ ಸಿಂಗ್, ಈ ಹಿಂದೆ ಕಲಬುರಗಿಯಲ್ಲಿ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಳೆದ ಬಾರಿ ಬೀದರ್‌ನಲ್ಲಿಯೂ ಉತ್ತಮ ರೀತಿಯಲ್ಲಿ ಸಮ್ಮೇಳನ ನಡೆದಿತ್ತು. ಅದೇ ಮಾದರಿಯಲ್ಲಿ ರಾಯಚೂರಿನಲ್ಲಿಯೂ ಯಾವುದೇ ಕೊರತೆಯಾಗದಂತೆ ಅದ್ದೂರಿಯಾಗಿ ಸಮ್ಮೇಳನ ಆಯೋಜಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದರು.
ಶೀಘ್ರದಲ್ಲೇ ರಾಯಚೂರಿಗೆ ಭೇಟಿ ನೀಡಿ, ಸಮ್ಮೇಳನದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸಭೆ ನಡೆಸುವುದಾಗಿ ಭರವಸೆ ನೀಡಿದರು. ಸಮ್ಮೇಳನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮ್ಮೇಳನದ ಲಾಂಛನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜು ಮಾತನಾಡಿ, ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರಿಗೆ ಉತ್ತಮ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಈ ಹಿಂದೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ ಅನುಭವವಿದ್ದು, ಸಮ್ಮೇಳನದ ಯಶಸ್ಸಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡುವುದಾಗಿ ಹೇಳಿದರು.
ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಈಗಾಗಲೇ ತಿಳಿಸಿದ್ದು, ಯಾವುದೇ ಜವಾಬ್ದಾರಿ ವಹಿಸಿದರೂ ಸಮರ್ಥವಾಗಿ ನಿರ್ವಹಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್. ಗುರುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ ಕುಕುನೂರು, ರಾಜ್ಯ ಸಮಿತಿ ಸದಸ್ಯರಾದ ಬಸವರಾಜ್ ನಾಗಡದಿನ್ನಿ, ಅರವಿಂದ್ ಕುಲಕರ್ಣಿ, ಖಜಾಂಚಿ ಮಲ್ಲಿಕಾರ್ಜುನಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 22,2026

ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ವಾರ್ಷಿಕಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇತಿಹಾಸವನ್ನು ನಮ್ಮ ಅಭಿಮಾನಕ್ಕೆ ತಕ್ಕಂತೆ ಬದಲಾಯಿಸಲು ಸಾಧ್ಯವಿಲ್ಲ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 22,2026
    In (ರಾಜ್ಯ ) ಜಿಲ್ಲೆ
  • ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.