Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ಬಸವ ಮಂಟಪ’ ಲೇಖಕ & ಪ್ರಕಾಶಕರ ವಿರುದ್ಧ ಎಫ್ಐಆರ್ ದಾಖಲು!
(ರಾಜ್ಯ ) ಜಿಲ್ಲೆ

‘ಬಸವ ಮಂಟಪ’ ಲೇಖಕ & ಪ್ರಕಾಶಕರ ವಿರುದ್ಧ ಎಫ್ಐಆರ್ ದಾಖಲು!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪ | ಲೇಖಕ ರವಿ ಹಂಜ್ ಮತ್ತು ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ನಿಲ್ಲದ ಬಸವ ಭಕ್ತರ ಆಕ್ರೋಶ

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಹಾಗೂ ಕವಿ ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ನೆಲೆಸಿರುವ ‘ಬಸವ ಮಂಟಪ’ ಪುಸ್ತಕದ ಲೇಖಕ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಪುಸ್ತಕದ ಪ್ರಕಾಶಕರೂ ಆಗಿರುವ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಹೆಸರನ್ನೂ ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ, ಇಬ್ಬರು ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಗಲಭೆ ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು (ಸೆಕ್ಷನ್ 192), ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಮತ್ತಿತರ ಆಧಾರಗಳಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (ಸೆಕ್ಷನ್ 196(1)), ಸಾರ್ವಜನಿಕರಿಗೆ ಕಿಡಿಗೇಡಿತನ ಉಂಟುಮಾಡುವ ಹೇಳಿಕೆಗಳನ್ನು ನೀಡುವುದು (ಸೆಕ್ಷನ್ 353(2)) ಹಾಗೂ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದ ದುರುದ್ದೇಶಪೂರಿತ ಕೃತ್ಯಗಳು (ಸೆಕ್ಷನ್ 299) ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಬಸವ ಮಂಟಪ’ ಪುಸ್ತಕ ಮುಟ್ಟುಗೋಲು!

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಬಸವ ಮಂಟಪ’ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅದರ ಲೇಖಕ ರವಿ ಹಂಜ್ ಮತ್ತು ಕನ್ನಡ ಪತ್ರಿಕೆಯ ಸಂಪಾದಕರೂ ಆಗಿರುವ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಬಸವಣ್ಣನವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಬಹುದೊಡ್ಡ ವರ್ಗ ಅಸಮಾಧಾನ ವ್ಯಕ್ತಪಡಿಸಿತ್ತು. ಸಮಾಜ ಸುಧಾರಕರನ್ನು ಅವಹೇಳನ ಮಾಡಿ, ಅವಮಾನಿಸಿದ್ದಾರೆ ಎಂದು ಆರೋಪಿಸಿ, ವಿಶ್ವವಾಣಿ ಟಿವಿಗೆ ನೀಡಿದ ಸಂದರ್ಶನದ ಹಿನ್ನೆಲೆಯಲ್ಲಿ ರವಿ ಹಂಜ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿತ್ತು. ಈ ಸಂದರ್ಶನದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ವಿವಾದ ಭುಗಿಲೆದ್ದು, ಬಳಿಕ ಹಂಜ್ ಕ್ಷಮೆಯಾಚಿಸಿದ್ದರು.
ಬಸವೇಶ್ವರರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿವೆ ಎನ್ನಲಾದ ರವಿ ಹಂಜ್ ಅವರ ಎಲ್ಲ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿತ್ತು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಭೆ ಒಪ್ಪಿಗೆ ಸೂಚಿಸಿತ್ತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೬ ರಂದು ಸಂವಿಧಾನ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಶಿಪ್ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೨೪ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ಬಸವ ದ್ರೋಹಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.