ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ನ.೨೪ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಕೆ.ಎಚ್.ಬಿ. ಕಾಲೋನಿಯ ಸೋಲಾಪುರ ರಸ್ತೆಯಲ್ಲಿರುವ ಗೀತಾಂಜಲಿ ಮಾದರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ.
ನಗರ ವಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಅಂದು ಬೆಳಿಗ್ಗೆ ೯ ಗಂಟೆಯೊಳಗೆ ತಾಲೂಕು ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ನೋಡಲ್ ಅಧಿಕಾರಿ ಶ್ರೀಮತಿ ಪಿ.ಜಿ. ಹಿರೇಮಠ ಅವರ ಬಳಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
