ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯನ್ನು ನ,೨೬ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ರಂಜಾನ್ ದರ್ಗಾ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
