Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ
(ರಾಜ್ಯ ) ಜಿಲ್ಲೆ

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಮ್ಮ ಫೌಂಡೇಶನ್ ರಾಜ್ಯಮಟ್ಟದ ಸಿರಿಗನ್ನಡ ಸಂಭ್ರಮ | ಪುಸ್ತಕ ಬಿಡುಗಡೆ | ಸಾಧಕರಿಗೆ ಪ್ರಶಸ್ತಿ ಪ್ರದಾನ | ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೆಕುಂದ್ರಿ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಯಿಯ ಸ್ಮರಣೆಯಲ್ಲಿ ಕನ್ನಡ ಭಾಷೆಯ ಅಸ್ಮಿತೆಗೆ ಸಾಕ್ಷಿಯಾದ ಅಮ್ಮ ಫೌಂಡೇಶನ್ ಕಾರ್ಯ ಶ್ಲಾಘನೀಯ, ಮಾತೃ ಪ್ರೀತಿಯ ಕನ್ನಡ ಭಾಷೆ ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡಬೇಕೆಂದು ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ ರಾಜ್ಯಮಟ್ಟದ ಸಿರಿಗನ್ನಡ ಸಂಭ್ರಮ, ಪುಸ್ತಕ ಬಿಡುಗಡೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ಕನ್ನಡ ಭಾಷೆ ಪರಕೀಯರ ಭಾಷೆಯ ಮೋಹದಿಂದ ನಲಗುತ್ತಿದೆ. ಕನ್ನಡವನ್ನು ತಾಯಿಗಿಂತ ಹೆಚ್ಚಾಗಿ ಪ್ರೀತಿಸಿ, ಗೌರವಿಸಿ, ಉಳಿಸಿ, ಬೆಳೆಸುವ ಕಾರ್ಯ ಮಾಡೋಣ ಎಂದರು.
ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮಾತನಾಡಿ, ಇಂಗ್ಲೀಷ ವ್ಯಾಮೋಹದಿಂದ ಕನ್ನಡತನಕ್ಕೆ ದಕ್ಕೆ ಬರುತ್ತಿದೆ. ಮಕ್ಕಳಿಗೆ ಕನ್ನಡ ಪ್ರೀತಿ ಬೆಳೆಸಬೇಕು. ಕನ್ನಡತನಕ್ಕೆ ಗೌರವ ಕೊಡುವ ಕಾರ್ಯ ಎಲ್ಲರಿಂದಲೂ ಆಗಬೇಕೆಂದು ಕರೆ ನೀಡಿದರು.
ಸಾಹಿತಿ ಬಸವರಾಜ ಹುಬ್ಬಳ್ಳಿಯವರ ಭಾವಗಳ ಪಯಣ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಕಲಬುರಗಿ ಲೋಕಾಯುಕ್ತ ಡಿವೈಎಸ್‌ಪಿ ಡಾ. ಬಸವರಾಜ ಯಲಿಗಾರ, ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಶ್ರೇಷ್ಠತೆ ಹೊಂದಿದೆ. ಭಾವಗಳ ಪಯಣ ಪುಸ್ತಕದಲ್ಲಿ ಅದು ಅನಾವರಣಗೊಂಡಿದೆ. ಲೇಖಕರು ಪ್ರಭುದ್ಧತೆಯಿಂದ ಕಾವ್ಯ ರಚನೆ ಮಾಡಿದ್ದಾರೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾತನಾಡಿ, ವಿವಿಧ ಕ್ಷೇತ್ರದ ವಿಶಿಷ್ಠ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುತ್ತಿರುವ ಅಮ್ಮ ಫೌಂಡೇಶನ್ ಕಾರ್ಯ ಸ್ವಾಗತಾರ್ಹವಾಗಿದೆ ಎಂದರು.
ದೇವರಹಿಪ್ಪರಗಿ ಪರದೇಶಿ ಮಠದ ಶಿವಯೋಗೇಶ್ವರ ಶಿವಾಚಾರ್ಯರು ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು.
ಸಿರಿಗನ್ನಡ ಸಂಭ್ರಮದ ನಿಮಿತ್ಯ ನಾಡಿನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಂಜಾರಾ ನೃತ್ಯ, ಗೊಂದಳಿ ಪದ, ಭರತ ನಾಟ್ಯ, ವಿವಿಧ ಕಲಾ ತಂಡಗಳಿಂದ ಸಮಾರಂಭ ಕಳೆಗಟ್ಟಿತ್ತು.
ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಬೂಲ್ ಕೊಕಟನೂರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್‌ಬಿ ವಿಸ್ಡಮ್ ಕರಿಯರ್ ಅಕಾಡೆಮಿ ಮುಖ್ಯಸ್ಥ ಶರಣಯ್ಯ ಭಂಡಾರಿಮಠ ಆಶಯ ನುಡಿಗಳನ್ನಾಡಿದರು.
ಕಾಂಗ್ರೆಸ್ ಮುಖಂಡರಾದ ಅಬ್ದುಲ್‌ಹಮೀದ ಮುಶ್ರೀಫ, ಯುವ ಭಾರತ ಸಮಿತಿ ಅಧ್ಯಕ್ಷ ಉಮೇಶ ಕಾರಜೋಳ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದರಫೀಕ ಟಪಾಲ, ಜಿಪಂ ಮಾಜಿ ಅಧ್ಯಕ್ಷೆ ಅಪ್ಸರಾಬೇಗಂ ಚಪ್ಪರಬಂದ, ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಎಂ ಸಿ ಮುಲ್ಲಾ, ರಾಜಶೇಖರ ಕುಚಬಾಳ, ದೀಪಾ ರೆಡ್ಡಿ, ಅರ್ಜುನ ಲಮಾಣಿ, ಸುರೇಶ ಶೆಡಶಾಳ, ಹಣಮಂತ ಕೊಣದಿ, ಎ ಎಂ ತಾಂಬೋಳಿ, ಅಶೋಕ ಚನಬಸಗೋಳ, ಮಲಕಪ್ಪ ಟಕ್ಕಳಕಿ, ಅಶೋಕ ಬೂದಿಹಾಳ ಯು ಐ ಶೇಖ, ಶಿವರಾಜ ಬಿರಾದಾರ, ಮಹಾಂತಗೌಡ ಪಾಟೀಲ, ಶ್ರೀಶೈಲ ಮುಳಜಿ, ಹುಸೇನ್ ಕೊಕಟನೂರ, ಮಹಿಬೂಬ ಕೊಕಟನೂರ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೬ ರಂದು ಸಂವಿಧಾನ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಶಿಪ್ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೨೪ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ಬಸವ ದ್ರೋಹಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.