ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವೈಯಕ್ತಿಕ, ಕ್ರೀಡೆ, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ವಿಕಲಚೇತನರು ಮತ್ತು ವಿಕಲಚೇತನರ ಕಲ್ಯಾಣಕ್ಕಾಗಿ ಉತ್ತಮ ಸೇವೆ ಸಲ್ಲಿಸಿದ ಸಂಸ್ಥೆಗಳಿಂದ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಎರಡು ಪ್ರತಿಗಳಲ್ಲಿ ನ.೨೬ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ೦೮೩೫೨-೭೯೬೦೬೦ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆ ತಿಳಿಸಿದೆ.
