Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ ಎಲ್ ಡಿ ಇ ಸಂಸ್ಥೆಯಿಂದ ಶಿಕ್ಷಣದ ಜೊತೆಗೆ ಜ್ಞಾನದಾಸೋಹ
(ರಾಜ್ಯ ) ಜಿಲ್ಲೆ

ಬಿ ಎಲ್ ಡಿ ಇ ಸಂಸ್ಥೆಯಿಂದ ಶಿಕ್ಷಣದ ಜೊತೆಗೆ ಜ್ಞಾನದಾಸೋಹ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಭುಚನ್ನಬಸವ ಶ್ರೀ ಅಭಿಮತ

ವಿಜಯಪುರ: ಬಸವಾದಿ ಶರಣರ ಆಶಯದಂತೆ ಪ್ರಾರಂಭವಾದ ಬಿ.ಎಲ್.ಡಿ.ಇ ಸಂಸ್ಥೆ ಜಿಲ್ಲೆಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಅಥಣಿಯ ಶ್ರೀ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದ್ದಾರೆ.
ಇಂದು ಸೋಮವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ಆಯೋಜಿಸಿದ್ದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಿಟೀಷರ ಆಡಳಿತದಲ್ಲಿ ಹಿಂದುಳಿದಿದ್ದ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ 1910ರಲ್ಲಿ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಸ್ಥಾಪಿಸಿದ ಈ ಸಂಸ್ಥೆಯ ಅಭಿವೃದ್ಧಿಗೆ ದಾನಚಿಂತಾಮಣಿ ಶ್ರೀಮತಿ ಬಂಗಾರಮ್ಮ ಸಜ್ಜನ, ಬಂಥನಾಳ ಶ್ರೀ ಸಂಗನಬಸವ ಶಿವಯೋಗಿಗಳು, ಶಿಕ್ಷಣ ಹರಿಕಾರ ದಿ. ಬಿ. ಎಂ. ಪಾಟೀಲರ ಜೊತಗೆ ಅನೇಕ ಜನರು ಶ್ರಮಿಸಿದ್ದಾರೆ. ಈಗ ಹಾಲಿ ಅಧ್ಯಕ್ಷರಾದ ಎಂ. ಬಿ. ಪಾಟೀಲ ಅವರು ಡಾ. ಹಳಕಟ್ಟಿ, ಆದಿಲಶಾಹಿ, ಡಾ. ಎಂ. ಎಂ. ಕಲಬುರ್ಗಿ ಅವರ ಸಮಗ್ರ ಸಂಪುಟಗಳನ್ನು ಪ್ರಕಟಿಸುವ ಮೂಲಕ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿರುವಂತೆ ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಶಿಕ್ಷಣದ ಜೊತೆಗೆ ಜನರಿಗೆ ಜ್ಞಾನದಾಸೋಹವನ್ನೂ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ನಮ್ಮ ಸಾಧು, ಸಂತರು ಪೂಜೆ, ಪುನಸ್ಕಾರಗಳ ಜೊತೆ ವಿದ್ಯಾಭ್ಯಾಸಕ್ಕೆ ಪ್ರಾಮುಖ್ಯತೆ ನೀಡದೇ ಹೋಗಿದ್ದರೆ ನಾವು ನಿರಕ್ಷರಿಗಳಾಗಿ ಉಳಿಯಬೇಕಿತ್ತು. ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪಕರ ದೂರದೃಷ್ಠಿಯ ಫಲವಾಗಿ ಇಂದು ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿಯಾಗಿದೆ. ಡಾ. ಫ. ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಬಿ. ಎಂ. ಪಾಟೀಲ ಅವರು ಕಟ್ಟಿ ಬೆಳೆಸಿರುವ ಈ ಸಂಸ್ಥೆಯನ್ನು ಹಾಲಿ ಅಧ್ಯಕ್ಷರಾದ ಎಂ. ಬಿ. ಪಾಟೀಲ ಅವರು ಇಂದಿನ ಉದಾರೀಕರಣ, ಜಾಗತೀಕರಣ, ಖಾಸಗೀಕರಣಕ್ಕೆ ಅಗತ್ಯಕ್ಕೆ ಅನುಗುಣವಾಗಿ ಹೆಮ್ಮರವಾಗಿ ಬೆಳೆಸಿದ್ದಾರೆ. ವಿಜಯಪುರದ ಜೊತೆ ಮತ್ತು ಜಮಖಂಡಿಯಲ್ಲಿಯೂ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಎಲ್ಲ ಅರ್ಹತೆ ಮತ್ತು ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದು ಹೇಳಿದರು.
ಇಂದು ವಿನಯ ಮತ್ತು ವಿವೇಕ, ವಿವೇಚನೆ, ಸೇವಾ ಮನೋಭಾವನೆಗಳನ್ನು ಒಳಗೊಂಡಿರುವ ಶಿಕ್ಷಣದ ಅಗತ್ಯವಿದ್ದು, ಬಿ.ಎಲ್.ಡಿ.ಇ ಸಂಸ್ಥೆ ಜ್ಞಾನ, ಕೌಶಲ್ಯ, ಸ್ಪರ್ಧೆಯ ಜೊತೆಗೆ ಮಾನವೀಯತೆ ಮತ್ತು ಸಂಸ್ಕೃತಿಯ ಬಗ್ಗೆ ಆಸ್ಥೆಯನ್ನು ಬೆಳೆಸಿಕೊಳ್ಳುವ ಶಿಕ್ಷಣವನ್ನು ನೀಡವ ಮೂಲಕ ಮಾನವೀಯ ಮೌಲ್ಯದ ಶಿಕ್ಷಣವನ್ನು ನೀಡಲಾಗುತ್ತಿದೆ. ನಾನು ಎಂಟ್ಹತ್ತು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದೇನೆ. ಆದರೆ, ಎಂ. ಬಿ. ಪಾಟೀಲ ಅಧ್ಯಕ್ಷತೆಯ ಈ ಸಂಸ್ಥೆಯಲ್ಲಿ ಯಾವುದೇ ಹಸ್ತಕ್ಷೇಪವಿಲ್ಲದೇ ನಮಗೆ ಕೆಲಸ ಮಾಡಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಬಿ.ಎಲ್.ಡಿ.ಇ. ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆ ಸಾಮಾನ್ಯರಿಗೆ ಶಿಕ್ಷಣ ನೀಡಿ ಜಾಣರನ್ನಾಗಿ ಮಾಡುವ ಕಾಯಕದಲ್ಲಿ ನಿರತವಾಗುವ ಮೂಲಕ ಸಂಸ್ಥಾಪಕರ ಕನಸನ್ನು ನನಸು ಮಾಡುತ್ತಿದೆ. ಇಲ್ಲಿ ಬೋಧನೆ ಮಾಡಿದ ಶಿಕ್ಷಕರು ಮತ್ತು ಕಲಿತ ವಿದ್ಯಾರ್ಥಿಗಳ ಆದರ್ಶಗಳಿಂದ ಹೆಮ್ಮರವಾಗಿ ಬೆಳೆದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ಸಂಶೋಧನೆ ಮಾಡಿದ 59 ನಾನಾ ಪ್ರಾಧ್ಯಾಪಕರು ಹಾಗೂ ರ‍್ಯಾಂಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ. ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಆಡಳಿತಾಧಿಕಾರಿಗಳಾದ ಪ್ರೊ. ಬಿ. ಆರ್. ಪಾಟೀಲ, ಪ್ರೊ. ಎ. ಎಸ್. ಕಾಳಪ್ಪನವರ, ಪ್ರೊ. ಎಸ್. ಎಚ್. ಲಗಳಿ, ಕ್ರೀಡಾ ನಿರ್ದೇಶಕ ಪ್ರೊ. ಎಸ್. ಎಸ್. ಕೋರಿ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಡಾ. ಕುಶಾಲದಾಸ, ಪ್ರೊ. ಬಿ. ಎಂ. ನುಚ್ಚಿ, ವಿಶ್ರಾಂತ ಪ್ರಾಚಾರ್ಯರಾದ ಎಸ್. ಜಿ. ತಾಳಿಕೋಟಿ, ಎಂ. ಎಸ್. ಝಳಕಿ, ಎ. ಎಸ್. ಬಗಲಿ, ಡಾ. ವೈ. ಬಿ. ಪಟ್ಟಣಶೆಟ್ಟಿ, ಡಾ. ವಿ. ಡಿ. ಐಹೊಳ್ಳಿ, ನಾನಾ ಕಾಲೇಜುಗಳ ಪ್ರಾಚಾರ್ಯರು, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ಡಾ. ಎಂ. ಎಸ್. ಮದಭಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುತ್ತುರಾಜ ಮಾದನಭಾವಿ ಪ್ರಾರ್ಥಿಸಿದರು. ಕವಿತಾ ಹೆಗಡೆ, ದೀಪ್ತಿ ಭಟ್ ವಚನ ಸಂಗೀತ ಹಾಡಿದರು. ಲಕ್ಷ್ಮಿ ಹಳಕಟ್ಟಿ, ಜ್ಯೋತಿ ಬಿರಾದಾರ ಹಾಗೂ ಸಂಗಡಿಗರು ಸಂಸ್ಥೆಯ ಗೀತೆ ಹಾಡಿದರು. ಪ್ರಾಚಾರ್ಯ ಪ್ರೊ. ಬಿ. ಎಸ್. ಬೆಳಗಲಿ ಸ್ವಾಗತಿಸಿ, ಪರಿಚಯಿಸಿದರು. ಪ್ರೊ. ರಶ್ಮಿ ಪಾಟೀಲ ಮತ್ತು ಪ್ರೊ. ದಾನಮ್ಮಾ ಗಿಡವೀರ ನಿರೂಪಿಸಿದರು. ಡಾ. ಭಾರತಿ ಮಠ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.