Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ

ಸ್ವಯಂ ಪ್ರೇರಿತ ರಕ್ತದಾನದಿಂದ ಜೀವ ಉಳಿಸಿ :ಡಾ.ಮಾಗಿ

ಪ್ರತಿಭಾ ಕಾರಂಜಿ & ಕಲೋತ್ಸವದಲ್ಲಿ ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಿ
(ರಾಜ್ಯ ) ಜಿಲ್ಲೆ

ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಸಕ್ತ ಸಾಲಿನಲ್ಲಿ ವಾಡಿಕೆಯಂತೆ ಮಳೆಯಾಗದ ಕಾರಣ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಮುಂಬರುವ ಬೇಸಿಗೆ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾಗಿ ಬಳಸಿ, ಅನಗತ್ಯವಾಗಿ ಪೋಲು ಮಾಡದಂತೆ ಜಾಗೃತಿ ವಹಿಸಬೇಕು ಎಂದು ಮೇಯರ್ ಮಡಿವಾಳಪ್ಪ ಕರಡಿ ಸೂಚಿಸಿದರು.
ನಗರದ ಕುಡಿಯುವ ನೀರಿನ ಸಮಸ್ಯೆಗಳು, ಸ್ವಚ್ಛತೆ ಹಾಗೂ ಬೀದಿ ದೀಪಗಳ ನಿರ್ವಹಣೆ ಕುರಿತು ನ.೨೪ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ನಗರದ ವಿವಿಧ ವಾರ್ಡ್ಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದಿರುವ ಕುರಿತು ಸದಸ್ಯರು ಸಭೆಯ ಗಮನಕ್ಕೆ ತಂದರು. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ನೀರು ಪೂರೈಕೆ ಮಾಡುತ್ತಿರುವುದಕ್ಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸ್ಪಂದಿಸಿದ ಮೇಯರ್ ಅವರು, ಜಲಮಂಡಳಿ ಅಧಿಕಾರಿಗಳು ವಿವಿಧ ವಾರ್ಡ್ಗಳನ್ನು ಪಾಕೆಟ್ ಅಥವಾ ಉಪವಲಯಗಳಾಗಿ ವಿಂಗಡಿಸಿ, ಹಗಲು ವೇಳೆಯಲ್ಲಿ ನಿಯಮಿತವಾಗಿ ನೀರು ಪೂರೈಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ನಗರದಲ್ಲಿ ನೀರಿನ ಪೈಪ್‌ಲೈನ್‌ಗಳ ಸೋರಿಕೆ ಹಾಗೂ ಹಾಳಾಗಿರುವ ಪೈಪ್‌ಲೈನ್‌ಗಳನ್ನು ತಕ್ಷಣ ದುರಸ್ತಿಗೊಳಿಸಬೇಕು. ಮುಂಬರುವ ಬೇಸಿಗೆಯಲ್ಲಿಯೂ ನಗರಕ್ಕೆ ನಿರಂತರ ನೀರು ಪೂರೈಸಲು ನದಿಗಳಲ್ಲಿನ ಜಲಮೂಲಗಳನ್ನು ಈಗಿನಿಂದಲೇ ಸಂರಕ್ಷಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಯ ಅಭಾವದಿಂದ ಮುಂದಿನ ದಿನಗಳಲ್ಲಿ ನಗರದಾದ್ಯಂತ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು. ನೀರಿನ ದುರುಪಯೋಗ ಹಾಗೂ ಅನಗತ್ಯ ಪೋಲನ್ನು ತಡೆಗಟ್ಟುವ ಮೂಲಕ ಪಾಲಿಕೆ ಮತ್ತು ಜಲಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ನಗರದ ವಿವಿಧ ವಾರ್ಡ್ಗಳಲ್ಲಿ ನೀರು ಪೂರೈಕೆಯಾದ ಸಂದರ್ಭದಲ್ಲಿ ಕೆಲವರು ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡುತ್ತಿರುವುದು ಕಂಡುಬಂದಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ, ನೀರು ವ್ಯರ್ಥ ಮಾಡುವವರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು. ದಂಡ ವಸೂಲಾತಿಗೆ ಸಂಬಂಧಿಸಿದಂತೆ ಮುಂದಿನ ಸಾಮಾನ್ಯ ಸಭೆಯಲ್ಲಿ ಸೂಕ್ತ ಠರಾವು ಪಾಸು ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಪಾಲಿಕೆಯ ಆದ್ಯ ಕರ್ತವ್ಯವಾಗಿದ್ದು, ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಎಲ್ಲ ಸದಸ್ಯರು ಸಹಕಾರ ನೀಡಬೇಕು ಎಂದು ಮೇಯರ್ ತಿಳಿಸಿದರು.
ಸಭೆಯಲ್ಲಿ ಪಾಲಿಕೆ ಸದಸ್ಯರು ತಮ್ಮ ತಮ್ಮ ವಾರ್ಡ್ಗಳಲ್ಲಿನ ಕುಡಿಯುವ ನೀರು, ಸ್ವಚ್ಛತೆ ಹಾಗೂ ಬೀದಿ ದೀಪಗಳ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಸಭೆಯಲ್ಲಿ ಪಾಲಿಕೆ ಸದಸ್ಯರು ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಮಹಾನಗರಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ

ಸ್ವಯಂ ಪ್ರೇರಿತ ರಕ್ತದಾನದಿಂದ ಜೀವ ಉಳಿಸಿ :ಡಾ.ಮಾಗಿ

ಪ್ರತಿಭಾ ಕಾರಂಜಿ & ಕಲೋತ್ಸವದಲ್ಲಿ ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಸಾಧನೆ

ನ.೨೮ ರಂದು ‘ಸಂತನೆಂದರೆ ಯಾರು’ ಕೃತಿ ಬಿಡುಗಡೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ವಯಂ ಪ್ರೇರಿತ ರಕ್ತದಾನದಿಂದ ಜೀವ ಉಳಿಸಿ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ & ಕಲೋತ್ಸವದಲ್ಲಿ ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೨೮ ರಂದು ‘ಸಂತನೆಂದರೆ ಯಾರು’ ಕೃತಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕಾನೂನು ಅರಿವಿನಿಂದಲೇ ಎಲ್ಲರಿಗೂ ನ್ಯಾಯದ ಲಭ್ಯತೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ನ.೨೫ ರಿಂದ ನಿಡಗುಂದಿಯಲ್ಲಿ ಬನಶಂಕರಿ ದೇವಿ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಡಾ.ವೀರೇಂದ್ರ ಹೆಗ್ಗಡೆ ಜನ್ಮದಿನ :ಅನ್ನದಾಸೋಹ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೂ ಸಹಪಠ್ಯ ಚಟುವಟಿಕೆ ಅಗತ್ಯ :ಕಾಲವಾಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.