ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ೨೦೨೬-೨೭ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸಿಂದಗಿಯ ಪಿ.ಎಂ.ಶ್ರೀ ಆದರ್ಶ ವಿದ್ಯಾಲಯದ ಬಾಲಕರ ಥ್ರೋಬಾಲ್ ತಂಡ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಮಸ್ತ ಶಿಕ್ಷಕ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

