ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಡಿ. ೪ರಂದು ನಗರದ ಸೋಲಾಪುರ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ೧೦ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗಾಕಾಂಕ್ಷಿಗಳು ತಮ್ಮ ಸ್ವ ವಿವರ ಹಾಗೂ ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಡಿ. ೪ರಂದು ನಿಗದಿತ ಸ್ಥಳಕ್ಕೆ ಆಗಮಿಸಿ, ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳುವಂತೆಯೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ಮೋ: ೯೯೪೫೦೦೦೭೯೩ ಹಾಗೂ ಮೊ:೯೦೦೮೬೦೫೦೩೧ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
