ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಹಾಗೂ ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ನೇರ ಸಂಪರ್ಕ ಏರ್ಪಡಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ವತಿಯಿಂದ ಉದ್ಯೋಗ ಸೇತು ಎಂಬ ಏಕೀಕೃತ ಡಿಜಿಟಲ್ ಪೋರ್ಟಲ್ ಅನುಷ್ಠಾನಗೊಳಿಸಲಾಗಿದೆ.
ಈ ಪೋರ್ಟಲ್ ಮೂಲಕ ಉದ್ಯೋಗಾಕಾಂಕ್ಷಿಗಳು ತಮ್ಮ ಅರ್ಹತೆ ಮತ್ತು ಕೌಶಲ್ಯಗಳಿಗೆ ಅನುಗುಣವಾಗಿ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅನುಕೂಲ ಕಲ್ಪಿಸಲಾಗಿದೆ. ಆದ್ದರಿಂದ ಆಸಕ್ತ ನಿರುದ್ಯೋಗಿ ಯುವಜನತೆ hಣಣಠಿs://ಥಿuvಚಿuಜಥಿogಚಿseಣhu.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ಸೈಟ್ಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು.
ವಿಶೇವಾಗಿ, ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ನಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಉದ್ಯೋಗ ಸೇತು ಪೋರ್ಟಲ್ನಲ್ಲಿಯೂ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ ಸಂಖ್ಯೆ ೦೮೩೫೨೨೫೦೩೮೩ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
