ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ವಿವಿಧ ಸಾಲ ಸೌಲಭ್ಯ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಅಡಿಯಲ್ಲಿ ೬(ಎ) ರಿಂದ ೬(ಕ್ಯೂ) ವರೆಗಿನ ವರ್ಗಗಳಿಗೆ ಸೇರಿದ ಅರ್ಹ ಫಲಾನುಭವಿಗಳು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ ೧೬ ಕೊನೆಯ ದಿನವಾಗಿದೆ. ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರುವ ಫಲಾನುಭವಿಗಳು ಹಾಗೂ ಅವರ ಕುಟುಂಬದ ಸದಸ್ಯರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಅರ್ಹ ಅಭ್ಯರ್ಥಿಗಳು ಸೇವಾ ಒನ್ ಪೋರ್ಟಲ್ hಣಣಠಿs://sevಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ಞumbಚಿಡಿಚಿಜಛಿ/ಠಿubಟiಛಿ ಅಥವಾ ದೂರವಾಣಿ ಸಂಖ್ಯೆಗಳಾದ ೦೮೦-೨೨೩೭೪೮೩೨, ೮೦೫೦೭೭೦೦೦೪ ಹಾಗೂ ೮೦೫೦೭೭೦೦೦೫ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
