ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಸ್ವಾವಂಬಿ ಸಾರಥಿ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.೧೬ ಕೊನೆಯ ದಿನವಾಗಿರುತ್ತದೆ. ಅರ್ಹ ಫಲಾನುಭವಿಗಳು ಅರ್ಜಿಸಲ್ಲಿಸಲು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಆಸಕ್ತರು ಸೇವಾ-೦೧ ಪೋರ್ಟಲ್ hಣಣಠಿ://sevಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿಯ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೦೪ ಹಾಗೂ ೮೦೫೦೭೭೦೦೦೫ಅನ್ನು ಸಂಪರ್ಕಿಸಬಹುದು ಎಂದು ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ನಿಗಮ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
