ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶಾಲೆಯ ಮುಖ್ಯ ಶಿಕ್ಷಕ ಶ್ರೀ ಲಕ್ಷ್ಮೀಪುತ್ರ ಕಿರನಳ್ಳಿ ಅವರು ಪೂಜೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.
ನಂತರ ಮಾತನಾಡಿದ ಅವರು, ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ನೀಡಿದೆ. ಸಂವಿಧಾನವು ನಮ್ಮ ದೇಶದ ಪ್ರಜಾಪ್ರಭುತ್ವದ ಬುನಾದಿಯಾಗಿದ್ದು, ಪ್ರತಿಯೊಬ್ಬರೂ ಸಂವಿಧಾನದ ಆಶಯಗಳು ಹಾಗೂ ಮೂಲಭೂತ ಕರ್ತವ್ಯಗಳನ್ನು ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಶಿಕ್ಷಣದ ಕುರಿತಾದ ಚಿಂತನೆಗಳು ಇಂದಿಗೂ ನಮಗೆ ದಾರಿದೀಪವಾಗಿವೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಕುಮಾರಿ ಸಮೃದ್ಧಿ ಗಣಾಚಾರಿ ಸಂವಿಧಾನ ಪೀಠಿಕೆಯನ್ನು ಬೋಧಿಸಿದಳು
ಈ ವೇಳೆ ಶಿಕ್ಷಕರಾದ ಚಂದ್ರಕಾಂತ ದೇವರಮನಿ,ಈರಣ್ಣ ಕಲಶೆಟ್ಟಿ,ಸುವರ್ಣ ಸಾರಂಗಮಠ,ಸೀತಾ ಆರೇಶಂಕರ,ಸರುಬಾಯಿ ಬಂಡಗರ,ಸುನೀತಾ ಗುಂಡದ,ಪ್ರಶಾಂತ ಗಡದೆ,ಐಯಿಶಾ ಬೇಪಾರಿ,ಅಂಜಲಿ ಕನ್ನೊಳ್ಳಿ,ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

