ವಿಜಯಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಮದ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ ಯೋಜನೆಯಡಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ, ಕರ್ನಾಟಕ ಒನ್, ಗ್ರಾಮ ಒನ್‌ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೦-೧೧-೨೦೨೩ ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
Related Posts
Add A Comment