ಉದಯರಶ್ಮಿ ದಿನಪತ್ರಿಕೆ
ಕಲಬುರಗಿ: ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಕಾರ್ಯಾಧ್ಯಕ್ಷರನ್ನಾಗಿ ಸಂಘಟಕ ರವೀಂದ್ರಕುಮಾರ ಭಂಟನಳ್ಳಿ ಹಾಗೂ ವಿಶ್ವಜ್ಯೋತಿ ಪ್ರತಿಷ್ಠಾನದ ಅಧ್ಯಕ್ಷರನ್ನಾಗಿ ಸಾಂಸ್ಕೃತಿಕ ಸಂಘಟಕ ಶಿವರಾಜ ಎಸ್ ಅಂಡಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅಕಾಡೆಮಿ ಹಾಗೂ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಬಸವಾದಿ ಶರಣರ ವಚನ ಸಾಹಿತ್ಯದ ಅಶಯಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ಸಂಘಟಿಸಿ ಹೊಸ ಪೀಳಿಗೆಯಲ್ಲಿ ವಚನ ಸಾಹಿತ್ಯ ಅರಿವು ಮೂಡಿಸಬೇಕೆಂದು ಮತ್ತು ಜಿಲ್ಲೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಇನ್ನೂ ಹೆಚ್ಚು ಆಯೋಜಿಸುವ ಮೂಲಕ ಈ ನೆಲದ ಹಿರಿಮೆ-ಗರಿಮೆಯನ್ನು ಹೊಸ ಪೀಳಿಗೆಗೆ ಮುಟ್ಟಿಸುವ ಕಾರ್ಯ ಮಾಡಬೇಕೆಂದು ಸೂಚಿಸಲಾಗಿದೆ.

