ವಿಜಯಪುರ: ಕೃಷಿ ಇಲಾಖೆ ವತಿಯಿಂದ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದಲ್ಲಿ ೫ ಜನ ರೈತರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ೧೦ ಜನ ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಾವಯವ-ಸಮಗ್ರ ಕೃಷಿ, ತೋಟಗಾರಿಕೆ, ರೇಷ್ಮೆ ಬೇಸಾಯ, ಪಶು ಸಂಗೋಪನೆ-ಮೀನುಗಾರಿಕೆ, ಸಿರಿಧಾನ್ಯ ಬೇಸಾಯ, ಕೃಷಿ ಅರಣ್ಯ ಕ್ಷೇತ್ರದಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ-ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ : ೨೪-೧೧-೨೦೨೩ರೊಳಗೆ ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ತಾಲೂಕಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ರೈತರು ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಓರ್ವ ರೈತ ಒಂದೇ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
