Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 29,2026

ಶರಣ ಪರಂಪರೆ ಮೇಲಿನ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ

ನಿರ್ಮೋಹಿ ಸಂತ, ಮಹಾನ್ ತತ್ವಜ್ಞಾನಿಯಾಗಿದ್ದ ಸಿದ್ಧೇಶ್ವರ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂವಿಧಾನವು ಸಮಾನತೆ ಮತ್ತು ಭ್ರಾತೃತ್ವದ ಸಂಕೇತ
(ರಾಜ್ಯ ) ಜಿಲ್ಲೆ

ಸಂವಿಧಾನವು ಸಮಾನತೆ ಮತ್ತು ಭ್ರಾತೃತ್ವದ ಸಂಕೇತ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಜಿಲ್ಲಾಡಳಿತ, ಜಿಪಂ‌ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ | ಶಾಸಕ ವಿಠಲ ಕಟಕಧೋಂಡ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತೀಯ ಸಂವಿಧಾನವು ದೇಶಪ್ರೇಮ, ಲಿಂಗಭೇದವಿಲ್ಲದ ಸಮಾನತೆ, ಸ್ವಾತಂತ್ರ‍್ಯ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಒಳಗೊಂಡಿರುವ ವಿಶಿಷ್ಟ ದಾಖಲೆಯಾಗಿದ್ದು, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ತಳಹದಿಯಾಗಿದೆ. ಸಂವಿಧಾನದ ಮೂಲಕ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕು ಮತ್ತು ಗೌರವಯುತ ಬದುಕಿನ ಅವಕಾಶ ಕಲ್ಪಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅನನ್ಯವಾಗಿದೆ ಎಂದು ಶಾಸಕ ವಿಠಲ ಕಟಕಧೋಂಡ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಭಾರತೀಯ ಸಂವಿಧಾನವು ಜಾತಿ, ಧರ್ಮ, ವರ್ಗ, ಬಡವ-ಬಲ್ಲಿದ ಎಂಬ ಯಾವುದೇ ಭೇದವಿಲ್ಲದೆ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಒದಗಿಸಿದೆ. ಸಂವಿಧಾನವು ಕೇವಲ ಕಾನೂನುಗಳ ದಾಖಲೆಯಾಗಿರದೆ, ಸಮಾನತೆ, ಸ್ವಾತಂತ್ರ‍್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳ ಆಧಾರದಲ್ಲಿ ದೇಶವನ್ನು ಮುನ್ನಡೆಸುವ ಮಾರ್ಗದರ್ಶಿಯಾಗಿದೆ. ಸಂವಿಧಾನದ ಆಶಯಗಳನ್ನು ಅರಿತು, ಅವುಗಳನ್ನು ನಮ್ಮ ನಡೆ-ನುಡಿಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆ ಮತ್ತು ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಎಂದೆಂದಿಗೂ ಅಜರಾಮರ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ,ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೋಳಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸುನಾಳ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೂವಿ, ಜೆ.ಎಸ್. ಪಾಟೀಲ, ಪೀರಪ್ಪ ನಡುವಿನಮನಿ, ಸಿದ್ದು ರಾಯಣ್ಣವರ, ಭೀಮರಾಯ ಜಿಗಜಿಣಗಿ, ಸೋಮು ಕಲ್ಲೂರ, ರಮೇಶ ಅಸಂಗಿ, ಅಹ್ಮದ್ ಪಟೇಲ್ ಭಾಗವಾನ, ರವೀಂದ್ರ ಬಂಥನಾಳ, ರವೀಂದ್ರ ಜಾಧವ, ದಿಲೀಪ ಪ್ರಭಾಕರ, ನಡಗೇರಿ, ಶರಣು ಸಿಂಧೆ, ಅಶೋಕ ಚಲವಾದಿ, ವಿನಾಯಕ ಗುಣಸಾಗರ, ವಿದ್ಯಾವತಿ ಅಂಕಲಗಿ, ರಾವುತ ತಳಕೇರಿ, ಅವಿನಾಶ ಬಾಣಿಕೋಲ, ಮಳಸಿದ್ದ ನಾಯ್ಕೋಡಿ, ಬಂಡಿವಡ್ಡರ, ಶ್ರೀನಿವಾಸ ಶಹಾಪುರ, ಕೆ.ವಿ. ಕೋರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಸತಿ ಶಾಲೆಗಳ ಪ್ರಾಂಶುಪಾಲರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಶಿವಾನಂದ ಬಡಿಗೇರ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೇಗೆ ನಾಗಠಾಣ ಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಅವರು ಮಹನಿಯರ ಪ್ರತಿಮೇಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಸಂವಿಧಾನವು ನಮ್ಮ ದೇಶದ ಸರ್ವೋಚ್ಚ ಕಾನೂನು

ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಮಾತನಾಡಿ, ಸಂವಿಧಾನವು ಕೇವಲ ಒಂದು ಪುಸ್ತಕ ಅಥವಾ ನಿಯಮಾವಳಿಯಲ್ಲ, ಅದೊಂದು ಜೀವಂತ ದಾಖಲೆಯಾಗಿದ್ದು, ದೇಶದ ಸರ್ವೋಚ್ಚ ಕಾನೂನಾಗಿದೆ. ದೇಶದ ಆಡಳಿತ ವ್ಯವಸ್ಥೆ, ಕಾನೂನು ರಚನೆ ಹಾಗೂ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಗೆ ಸಂವಿಧಾನವೇ ಮೂಲ ಆಧಾರವಾಗಿದೆ. ಯಾವುದೇ ಹೊಸ ಕಾನೂನು ರಚಿಸುವಾಗಲೂ ಸಂವಿಧಾನದ ಆಶಯ, ತತ್ವಗಳು ಮತ್ತು ಮೌಲ್ಯಗಳ ತಳಹದಿಯಾಗಿದೆ ಎಂದು ಹೇಳಿದರು.
ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಹಲವು ಮೂಲಭೂತ ಹಕ್ಕುಗಳನ್ನು ಒದಗಿಸಿದೆ. ಹಕ್ಕುಗಳ ಜೊತೆಗೆ ನಾಗರಿಕರು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರಿತು ಪಾಲಿಸಬೇಕು. ಹಕ್ಕು ಮತ್ತು ಕರ್ತವ್ಯಗಳು ಒಂದಕ್ಕೊಂದು ಪೂರಕವಾಗಿದ್ದು, ಇವೆರಡರ ಸಮರ್ಪಕ ಪಾಲನೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಹೇಳಿದರು.


ಬಸವಣ್ಣನವರ ವಚನಗಳು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕ :ದರ್ಗಾ

ಭಾರತದ ಸಂವಿಧಾನದ ಮೂಲ ಆಶಯವೇ ಎಲ್ಲರನ್ನು ಒಳಗೊಳ್ಳುವ ಸಂಸ್ಕೃತಿಯಾಗಿದೆ. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಗೌರವ ಮತ್ತು ನ್ಯಾಯ ದೊರೆಯಬೇಕು ಎಂಬ ಉದಾತ್ತ ಪರಿಕಲ್ಪನೆಯನ್ನು ಸಂವಿಧಾನ ಹೊಂದಿದೆ. ನಮ್ಮ ಜೀವನದ ಪ್ರತಿಯೊಂದು ಉಸಿರಿನಲ್ಲಿಯೂ ಸಂವಿಧಾನದ ಆಶಯಗಳು ಅಡಕವಾಗಿವೆ. ಸಂವಿಧಾನವು ಕೇವಲ ಆಡಳಿತಾತ್ಮಕ ದಾಖಲೆಯಲ್ಲ, ಅದು ಇಡೀ ಬದುಕಿನ ಮಾರ್ಗದರ್ಶಿ ಹಾಗೂ ಪ್ರಜಾಪ್ರಭುತ್ವದ ಸೌಂದರ್ಯವಾಗಿದೆ ಎಂದು ಹಿರಿಯ ಸಾಹಿತಿ ರಂಜಾನ್ ದರ್ಗಾ ಹೇಳಿದರು.
ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡುತ್ತ, ಬಸವಣ್ಣನವರ ವಚನಗಳು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿವೆ. ಬಡವರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನತೆ ದೊರೆಯಬೇಕು ಎಂಬ ಕನಸನ್ನು ಬಸವಾದಿ ಶರಣರು ಕಂಡಿದ್ದರು. ಅವರ ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಸಮಾಜದ ಪ್ರತಿಯೊಬ್ಬರೂ ಯಾವುದೇ ತಾರತಮ್ಯವಿಲ್ಲದೆ ಸಮಾನ ಅವಕಾಶ ಮತ್ತು ಗೌರವದಿಂದ ಬದುಕುವ ವಾತಾವರಣವನ್ನು ಸಂವಿಧಾನ ಕಲ್ಪಿಸಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾಕಾರಗೊಳಿಸುವ ಶಕ್ತಿ ಸಂವಿಧಾನಕ್ಕಿದ್ದು, ಪ್ರತಿಯೊಬ್ಬರೂ ಅದರ ಮಹತ್ವವನ್ನು ಅರಿತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದು ಅಗತ್ಯ ಎಂದು ರಂಜಾನ ದರ್ಗಾ ತಿಳಿಸಿದರು.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 29,2026

ಶರಣ ಪರಂಪರೆ ಮೇಲಿನ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ

ನಿರ್ಮೋಹಿ ಸಂತ, ಮಹಾನ್ ತತ್ವಜ್ಞಾನಿಯಾಗಿದ್ದ ಸಿದ್ಧೇಶ್ವರ ಶ್ರೀ

ಸಂಭ್ರಮದಿಂದ ಜರುಗಿದ ಬನಶಂಕರಿದೇವಿ ರಥೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 29,2026
    In ದಿನಪತ್ರಿಕೆ
  • ಶರಣ ಪರಂಪರೆ ಮೇಲಿನ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ನಿರ್ಮೋಹಿ ಸಂತ, ಮಹಾನ್ ತತ್ವಜ್ಞಾನಿಯಾಗಿದ್ದ ಸಿದ್ಧೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಸಂಭ್ರಮದಿಂದ ಜರುಗಿದ ಬನಶಂಕರಿದೇವಿ ರಥೋತ್ಸವ
    In (ರಾಜ್ಯ ) ಜಿಲ್ಲೆ
  • ಡಿ.೫-೬ ರಂದು ದೇಶಿ ತಳಿ ನಾಯಿಮರಿಗಳ ದತ್ತು ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಆದರ್ಶಗಳು ಸಮಾಜಕ್ಕೆ ದಾರಿದೀಪ :ಕೊಡಗೆ
    In (ರಾಜ್ಯ ) ಜಿಲ್ಲೆ
  • ಸದಸ್ಯರಾಗಿ ಪವಿತ್ರಾ ಕುಂಬಾರ ನೇಮಕ
    In (ರಾಜ್ಯ ) ಜಿಲ್ಲೆ
  • ಮೂಢನಂಬಿಕೆ ತೊರೆದು ಕನಕದಾಸರ ಸಂದೇಶ ಪಾಲಿಸಿ
    In (ರಾಜ್ಯ ) ಜಿಲ್ಲೆ
  • ವಿಜೃಂಬಣೆಯಿಂದ ಜರುಗಿದ ಮಹಾಲಕ್ಷ್ಮಿ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಯುವಕರೆ ದುಶ್ಚಟಗಳಿಂದ ದೂರವಿರಿ :ಪಿಎಸೈ ಯತೀಶ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.