ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಕಾರ್ಯಾಲಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಸಮಾನತೆ, ಭಕ್ತಿ, ಮಾನವೀಯತೆ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರಿದ್ದಾರೆ. ಅವರ ಆದರ್ಶಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ ಎಂದು ಮುಖಂಡರು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಚಂದ್ರಶೇಖರ್ ಕವಟಗಿ ಅವರು ಕನಕದಾಸರ ಜೀವನ ಚರಿತ್ರೆ, ಭಕ್ತಿ ಪರಂಪರೆ, ಸಾಹಿತ್ಯಿಕ ಕೊಡುಗೆ ಹಾಗೂ ಸಮಾಜ ಸುಧಾರಣೆಯಲ್ಲಿ ಅವರ ಪಾತ್ರದ ಕುರಿತು ವಿವರವಾಗಿ ಮಾತನಾಡಿದರು. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜಾತಿ-ಮತಗಳ ಭೇದಭಾವವನ್ನು ಮೀರಿ ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾರಿದ ಮಹಾನ್ ಸಂತರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ್ ಪಾಟೀಲ್, ಪಾಪು ಸಿಂಗ್ ರಜಪೂತ್, ಚನ್ನಗುಂಡಿ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟೆ, ರಾಹುಲ್ ಜಾದವ್, ರಾಜು ಬಿರಾದಾರ್, ಕೃಷ್ಣ ಗೋನಾಳಕರ್, ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ್ ಜೋಶಿ, ಭರತ ಕೋಳಿ ಅಪ್ಪು ಕುಂಬಾರ, ಬಸವರಾಜ್ ದಂದರಗಿ, ಸಂಜು ಬಡಿಗೇರ್, ಸಂತೋಷ್ ಪತ್ತಾರ್, ವಿವೇಕ್ ತಾವರಗೇರಿ, ಸದಾಶಿವ ಪೂಜಾರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

