ವಿಜಯಪುರ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ ೦೬ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲ ಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ ವಿವರಗಳನ್ನು ಒಳಗೊಂಡ ಅರ್ಜಿಯನ್ನು ದಿನಾಂಕ : ೧೮-೧೧-೨೦೨೩ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆ, ಮಾನದಂಡಗಳು ಸೇರಿದಂತೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://balavikasaacademy.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment