Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ

ಎಲ್ಲ ಕಚೇರಿಗಳು ನಿಡಗುಂದಿಯಲ್ಲಿಯೇ ನಿರ್ಮಾಣ

ಸಂವಿಧಾನ ಪ್ರತಿ ಭಾರತೀಯನ ಆಸ್ತಿ :ಪ್ರೊ.ಲಕ್ಕಣ್ಣನವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂವಿಧಾನ ಪ್ರತಿ ಭಾರತೀಯನ ಆಸ್ತಿ :ಪ್ರೊ.ಲಕ್ಕಣ್ಣನವರ
(ರಾಜ್ಯ ) ಜಿಲ್ಲೆ

ಸಂವಿಧಾನ ಪ್ರತಿ ಭಾರತೀಯನ ಆಸ್ತಿ :ಪ್ರೊ.ಲಕ್ಕಣ್ಣನವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂವಿಧಾನವು ಯಾವುದೇ ಧರ್ಮ ಅಥವಾ ಜನಾಂಗಕ್ಕೆ ಸೀಮಿತವಾದುದಲ್ಲ. ಅದು ಇಡೀ ಭಾರತೀಯರ ಆಸ್ತಿಯಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕುವ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣನವರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ನ. ೨೬ ರಂದು ಹಮ್ಮಿಕೊಂಡಿದ್ದ ಭಾರತದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂವಿಧಾನದ ಮಹತ್ವವನ್ನು ಸ್ಮರಿಸಿದ ಅವರು ಭಾರತದಂತ ವಿವಿಧತೆ ನೆಲೆಸಿರುವ ರಾಷ್ಟçದಲ್ಲಿ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನವನ್ನು ಸಂವಿಧಾನ ಮಾಡುತ್ತದೆ. ವಿದ್ಯಾರ್ಥಿನಿಯರು ಸಂವಿಧಾನವನ್ನು ಅಧ್ಯಯನ ಮಾಡಿ, ಅದರ ಅಂಶಗಳನ್ನು ಜೀವನದಲ್ಲಿ ಅನುಷ್ಠಾನಗೊಳಿಸಿಕೊಳ್ಳಬೇಕು. ಸಮಾಜದ ಪ್ರತಿಯೋರ್ವ ನಾಗರಿಕರು ಒಗ್ಗಟ್ಟಾಗಿ ಶ್ರಮಿಸಿದರೆ ಸಂವಿಧಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟ ಮತ್ತು ಕೊಡುಗೆಗಳನ್ನು ವಿದ್ಯಾರ್ಥಿನಿಯರು ಸ್ಮರಿಸಬೇಕು. ಸಮಾಜದಲ್ಲಿ ಶೋಷಣೆಗೊಳಗಾದವರು, ಮಹಿಳೆಯರು ಹಾಗೂ ನಿರ್ಗತಿಕರ ಸುಸ್ಥಿರ ಬದುಕನ್ನು ಗಮನದಲ್ಲಿಟ್ಟುಕೊಂಡು ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನ ಶ್ರೇಷ್ಠವಾದುದು. ಇದು ಪ್ರತಿಯೊಬ್ಬ ಭಾರತೀಯನ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವುದರ ಜತೆಗೆ ಪ್ರತಿಯೊಬ್ಬರಿಗೂ ಕಾನೂನಾತ್ಮಕ ರಕ್ಷಣೆಯನ್ನು ಒದಗಿಸುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಅಪಾರ ಶ್ರಮ ವಹಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಸಂದೀಪ್ ನಾಯಕ್ ಸ್ವಾಗತಿಸಿ, ನಿರೂಪಿಸಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಅನಿತಾ ನಾಟಿಕಾರ್ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ

ಎಲ್ಲ ಕಚೇರಿಗಳು ನಿಡಗುಂದಿಯಲ್ಲಿಯೇ ನಿರ್ಮಾಣ

ಯಶಸ್ವಿ ಜೀವನಕ್ಕೆ ಕಠಿಣ ಪರಿಶ್ರಮ ಅಗತ್ಯ :ಶೀಫಾ

ಕನಕದಾಸರ ಆದರ್ಶಗಳು ಬದುಕಿಗೆ ದಾರಿದೀಪ :ಡಾ.ಔದ್ರಾಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಚೇರಿಗಳು ನಿಡಗುಂದಿಯಲ್ಲಿಯೇ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಸಂವಿಧಾನ ಪ್ರತಿ ಭಾರತೀಯನ ಆಸ್ತಿ :ಪ್ರೊ.ಲಕ್ಕಣ್ಣನವರ
    In (ರಾಜ್ಯ ) ಜಿಲ್ಲೆ
  • ಯಶಸ್ವಿ ಜೀವನಕ್ಕೆ ಕಠಿಣ ಪರಿಶ್ರಮ ಅಗತ್ಯ :ಶೀಫಾ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಆದರ್ಶಗಳು ಬದುಕಿಗೆ ದಾರಿದೀಪ :ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ಅನೀಮಿಯಾ ತಡೆಗಟ್ಟುವಲ್ಲಿ ಸಂಸ್ಥೆಗಳ ಪಾತ್ರ ಅನನ್ಯ :ಗುಮಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಉಳಿತಾಯ ಸಂದೇಶಕ್ಕೆ ಸಂಸದ ಜಿಗಜಿಣಗಿ ಬೆಂಬಲ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಜಯಂತಿ ಭಕ್ತಿಪೂರ್ವಕ ಆಚರಿಸಿದ ಬಿಜೆಪಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಸಾರಿದ ಭಕ್ತ ಕನಕದಾಸರು
    In (ರಾಜ್ಯ ) ಜಿಲ್ಲೆ
  • ಸ್ವಾಂತಂತ್ರ್ಯ ಸಂಗ್ರಾಮದ ಸಂತ ಶ್ರೀ ಸ್ವಾಮಿ ರಮಾನಂದ ತೀರ್ಥರು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.