Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಿರಲಿ
(ರಾಜ್ಯ ) ಜಿಲ್ಲೆ

ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಿರಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಶಾ ಮುಕ್ತ ಭಾರತ ಅಭಿಯಾನ | ಸ್ವಾಸ್ಥ್ಯ ಸಂಚರಣೆ ಹಾಗೂ ಮಹಿಳಾ ಹಿಂಸಾಚಾರ ನಿರ್ಮೂಲನಾ ದಿನಾಚರಣೆಯಲ್ಲಿ ಸಿವಿಲ್ ನ್ಯಾಯಾಧೀಶ ರಾಮಮೂರ್ತಿ ಎನ್ ಕರೆ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ದೇಶದ ಭವಿಷ್ಯವಾಗಿರುವ ಯುವಸಮೂಹ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ಸದೃಢ ಹಾಗೂ ಆರೋಗ್ಯವಂತ ಸಮಾಜ ಕಟ್ಟಲು ಮುಂದಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಾಮಮೂರ್ತಿ ಎನ್ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಜಾಗೃತಿ, ಸ್ವಾಸ್ಥ್ಯ ಸಂಚರಣೆ ಹಾಗೂ ಮಹಿಳೆಯರ ಮೇಲಿನ ಹಿಂಸಾಚಾರ ನಿರ್ಮೂಲನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಣಿಕ ಮೋಹಕ್ಕಾಗಿ ಯುವಜನತೆ ಮಾದಕ ವ್ಯಸನದ ಸುಳಿಗೆ ಸಿಲುಕಿ ತಮ್ಮ ಅಮೂಲ್ಯ ಬದುಕನ್ನು ನಾಶಪಡಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿಯೇ ದುಶ್ಚಟಗಳಿಗೆ ನೋ ಹೇಳುವ ದೃಢ ಸಂಕಲ್ಪ ಮಾಡಬೇಕು. ಜೊತೆಗೆ, ಮನೆ ಮತ್ತು ಸಮಾಜದಲ್ಲಿ ಮಹಿಳೆಯರನ್ನು ಗೌರವದಿಂದ ಕಾಣುವ ಸಂಸ್ಕಾರ ಬೆಳೆಸಿಕೊಳ್ಳಬೇಕು. ಮಹಿಳೆಯರ ರಕ್ಷಣೆಗಾಗಿ ಕಠಿಣ ಕಾನೂನುಗಳಿದ್ದು, ಅನ್ಯಾಯಕ್ಕೊಳಗಾದವರು ಹಿಂಜರಿಯದೆ ಕಾನೂನು ನೆರವು ಪಡೆಯಬೇಕು. ಮಹಿಳೆಯರ ಮೇಲಿನ ಎಲ್ಲಾ ಬಗೆಯ ದೌರ್ಜನ್ಯಗಳನ್ನು ತಡೆಗಟ್ಟಿ ಅವರಿಗೆ ನಿರ್ಭೀತ ಹಾಗೂ ಗೌರವಯುತ ಬದುಕು ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲಾಗುವ ಗಂಭೀರ ದುಷ್ಪರಿಣಾಮಗಳು, ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ ಇರುವ ಕಠಿಣ ಶಿಕ್ಷೆಗಳು ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಮಹಿಳಾ ಪರ ಕಾನೂನುಗಳ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ ಅಧ್ಯಕ್ಷತೆ ವಹಿಸಿ, ನ್ಯಾ.ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ ಹಾಗೂ ಎಎಸ್‌ಐ ಕೆ.ಎಸ್.ಅಕ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಸಂದೇಶ ನೀಡಿದರು. ಕಾರ್ಯಕ್ರಮದ ಅಂಗವಾಗಿ ನಡೆದ ಸ್ವಾಸ್ಥ್ಯ
ಸಂಚರಣೆಯಲ್ಲಿ ವಿದ್ಯಾರ್ಥಿಗಳು ಹಾಗೂ ಗಣ್ಯರು ಪಾಲ್ಗೊಂಡು ಮಾದಕ ವಸ್ತುಗಳ ವಿರುದ್ಧ ಮತ್ತು ಮಹಿಳಾ ಸುರಕ್ಷತೆಯ ಪರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾಲೇಜಿನ ಉಪನ್ಯಾಸಕ ವೃಂದ, ವಿವಿಧ ಇಲಾಖೆಗಳ ಅಧಿಕಾರಿಗಳು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರಾಧ್ಯಾಪಕ ಹಾಗೂ ಪ್ರವಚನಕಾರ ಐ.ಬಿ.ಹಿರೇಮಠ ನಿರೂಪಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಚಿಂತನೆ ಮನುಕುಲಕ್ಕೆ ಮಾರ್ಗದರ್ಶಿ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಆದರ್ಶದ ಬದುಕು ನಮಗೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ’ಜಯ ಕನಕ’ ಧ್ವನಿ ಸುರುಳಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಬಡವರ ಮನೆಬಾಗಿಲಿಗೆ ನ್ಯಾಯ ತಲುಪಿಸುವುದೇ ಕಾನೂನು ಪ್ರಾಧಿಕಾರದ ಆಶಯ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.