ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಶಾಸನ ಪಡೆಯುತ್ತಿರುವವರು ನವೆಂಬರ್ ತಿಂಗಳಿನಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.
ಇಲಾಖೆಯಿಂದ ಈಗಾಗಲೇ ಮಾಶಾಸನ ಪಡೆಯುತ್ತಿರುವ, ಕಷ್ಟ ಪರಿಸ್ಥಿತಿಯಲ್ಲಿರುವ ಸಾಹಿತಿ-ಕಲಾವಿದರಿಗೆ ಹಾಗೂ ಮೃತಪಟ್ಟ ಕಲಾವಿದರ ಪತ್ನಿಯರಿಗೆ ಮಾಶಾಸನ ನೀಡಲಾಗುತ್ತಿದ್ದು, ಆಧಾರ ಪ್ರತಿ,ಪಿಂಚಣಿ ಪುಸ್ತಕ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಐಡೆಂಟಿಟಿ ಅಳತೆ ಭಾವಚಿತ್ರದೊಂದಿಗೆ ಜೀವಂತ ಪ್ರಮಾಣ ಪತ್ರವನ್ನು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆಯೂ,ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment