ವಿಜಯಪುರ: ಜಿಲ್ಲೆಯಲ್ಲಿ ಬರುವ ಮಲಘಾಣ ಪಶ್ಚಿಮ ಕಾಲುವೆ, ಮನಗೂಳಿ ಶಾಖಾ ಕಾಲುವೆ ಮತ್ತು ಬಬಲೇಶ್ವರ ಶಾಖಾ ಕಾಲುವೆ-೧ &೨ರ ಜಾಲದ ಅಡಿಯಲ್ಲಿ ಬರುವ ಕೆರೆಗಳನ್ನು ಪ್ರತಿಶತ ೫೦ರಷ್ಟು ಭರ್ತಿಗೊಳಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳಿಗೆ ಕಾಲುವೆ ಜಾಲಗಳ ಕೊನೆಯ ಭಾಗದವರೆಗೆ ನೀರನ್ನು ಹರಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುವೆಗಳ ಎಡ-ಬಲ ೧೦೦ ಅಡಿ ವ್ಯಾಪ್ತಿಯಲ್ಲಿ ದಿನಾಂಕ : ೦೪-೧೧-೨೦೨೩ ರಿಂದ ೧೫-೧೧-೨೦೨೩ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಕಾಲುವೆ ವ್ಯಾಪ್ತಿಯ ದಡದ ೧೦೦ ಅಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು-ಗುಂಪಾಗಿ ಓಡಾಡುವುದನ್ನು ನಿಷೇಧಿಸಿದೆ. ಕಾಲುವೆಗಳಿಂದ ಅಕ್ರಮ ಪಂಪಸೆಟ್-ಸೈಫನ್-ಜಲಚರದಿಂದ ಸೈಫನ್ ಮೂಲಕ ನೀರನ್ನು ಉಪಯೋಗಿಸಕೂಡದು. ಸದರಿ ಕಾಲುವೆಗಳ ವ್ಯಾಪ್ತಿಯಲ್ಲಿ ಕಾಲುವೆಗಳಿಂದ ಅಕ್ರಮ ಪಂಪಸೆಟ್ ಮೂಲಕ ನೀರನ್ನು ಬಳಸುತ್ತಿದ್ದಲ್ಲಿ ಅಂತಹ ಪಂಪಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಇಲಾಖೆಯವರು ಕಡಿತಗೊಳಿಸಲಿದ್ದಾರೆ. ಕಾಲುವೆ ದಡದ ಸುತ್ತಮುತ್ತಲಿನ ೧೦೦ ಅಡಿ ಪ್ರದೇಶದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಕೆರೆ ಹಾಗೂ ಕಾಲುವೆಗಳಿಗೆ ಯಾವುದೇ ರೀತಿ ಹಾನಿ ಮಾಡಕೂಡದು. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

