ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿಎಲ್ಡಿಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿ, ಕನ್ನಡ ವಿಭಾಗದ ಸಹಯೋಗದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸ ರವರ ಭಕ್ತಿಭಾವದಿಂದ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ.ಶ್ರೀನಿವಾಸ ಎ.ಟಿ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಡಾ.ಉಷಾದೇವಿ ಹಿರೇಮಠ, ಡಾ.ಅನೀಲ.ನಾಯಕ, ಮಹಾವಿದ್ಯಾಲಯದ ಇನ್ನಿತರ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

