ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ನಗರಸಭೆ ೯ನೇ ವಾರ್ಡಿನ ನಿವಾಸಿ ಪವಿತ್ರಾ ಸಚಿನ ಕುಂಬಾರ ಅವರನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿಯುತ ಹುದ್ದೆ ನೀಡಿದ ರಾಜ್ಯ ಸರ್ಕಾರಕ್ಕೆ, ಶಾಸಕ ಅಶೋಕ ಮನಗೂಳಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

