Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿ ಪಂಪ್‍ಸೆಟ್‍ಗಳಿಗೆ ನಿತ್ಯ 7ಗಂಟೆ ವಿದ್ಯುತ್ ಸರಬರಾಜು
(ರಾಜ್ಯ ) ಜಿಲ್ಲೆ

ಕೃಷಿ ಪಂಪ್‍ಸೆಟ್‍ಗಳಿಗೆ ನಿತ್ಯ 7ಗಂಟೆ ವಿದ್ಯುತ್ ಸರಬರಾಜು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಠನೆ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ವಿದ್ಯುತ್ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲ ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್‍ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು.
ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳ
ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದು. ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ. ಸುಮಾರು 2400 ರಿಂದ 3200 ಮೆ.ವ್ಯಾ, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಕಬ್ಬು ಅರೆಯುವುದು ಪ್ರಾರಮಭವಾಗಿ ಕೋ-ಜನರೇಷನ್ ಆಗಿರುವುದರಿಂದ 450 ಮೆ.ವ್ಯಾಟ್ ಉತ್ಪಾದನೆಯಾಗಿದೆ. ಕೂಡ್ಲಗಿಯಲ್ಲಿ 150 ಮೆ.ವ್ಯಾ ಕರ್ನಾಟಕಕ್ಕೆ ಉಳಿತಾಯವಾಗಲಿದೆ ಹಾಗೂ ಖರೀದಿ ಮಾಡುತ್ತಿರುವುದರಿಂದ ಹೆಚ್ಚು ವಿದ್ಯುತ್ ದೊರೆಯಲಿದೆ. ಹಾಗಾಗಿ ಇಂದಿನಿಂದ 7 ತಾಸು ವಿದ್ಯುತ್‍ನ್ನು ಪಂಪ್‍ಸೆಟ್‍ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ, ಗೃಹಬಳಕೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿಲ್ಲ. ಪಂಪ್‍ಸೆಟ್‍ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಿದೆ. 13100 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಒದಗಿಸಲಾಗಿದೆ ಎಂದರು.
ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು 40 ಯೂನಿಟ್‍ಗಳಿಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ. ಇನ್ನು ಮುಂದೆ ಬಾಕಿ ಕೊಡಬೇಕಾದ ಅಗತ್ಯವಿಲ್ಲ. ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜೂನಿಯರ್ ಕಾಲೇಜುಗಳಿಗೆ ನವೆಂಬರ್ 1 ರಂದು ಘೋಷಿಸಿದಂತೆ ವಿದ್ಯುತ್ ಹಾಗೂ ನೀರಿನ ವೆಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮುಂದಿನ ಮುಂಗಾರಿನವರೆಗೆ ಮಳೆ ಬರುವುದಿಲ್ಲ ಎಂದು ಲೆಕ್ಕ ಹಾಕಿಯೇ ಈ ತೀರ್ಮಾನ ಮಾಡಲಾಗಿದೆ. ಜುಲೈ ಅಂತ್ಯದವರೆಗೆ ಲೆಕ್ಕ ಹಾಕಲಾಗಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.