ವಿಜಯಪುರ: ಕನ್ನಡ ಭಾಷೆಯದ್ದು ಅವಿಚ್ಛಿನ್ನ ಪರಂಪರೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಅದ್ಭುತವಾದ ಭವ್ಯ ಪರಂಪರೆ ಹೊಂದಿದೆ. ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಇಂದಿನ ಮಕ್ಕಳು ರೂಢಿಸಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.
ಅವರು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಕನ್ನಡ ಭಾಷೆ, ನಾಡು- ನುಡಿ- ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕನ್ನಡಿಗರು ಜವಾಬ್ದಾರಿ ಹೊತ್ತುಕೊಳ್ಳಬೇಕು. ಅನೇಕ ಮಹನೀಯರು ಕನ್ನಡದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವುಗಳನ್ನು ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ,
ಶಿಕ್ಷಕರಾದ ರಾಘು ಮೊಗಳ, ಭೀಮಾಶಂಕರ ಕೋರೆ, ಬಸಮ್ಮ ವಡಗೇರಿ, ಜಯಶ್ರೀ ಬಂಗಾರಿ, ಮಧುಮತಿ ನಿಕ್ಕಂ, ಸರೋಜಿನಿ ಕಟ್ಟಿಮನಿ, ರೇಣುಕಾ ಭಜಂತ್ರಿ, ಎಲ್ ಎಂ ಮೇತ್ರಿ ಹಾಗೂ ಸಿಬ್ಬಂದಿಗಳಾದ ವೀರೇಶ ಹುಣಶ್ಯಾಳ,
ಸಿದ್ದಣ್ಣ ಅರಕೇರಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment