ಬಸವನಬಾಗೇವಾಡಿ: ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ನಿರ್ದೇಶನದ ಮೇರೆಗೆ ಅಮೃತ ೨.೦ ಕಾರ್ಯಕ್ರಮದಡಿ ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ದ್ಯೇಯ ವಾಕ್ಯದಡಿ ಜಲ ದೀಪಾವಳಿ ಕಾರ್ಯಕ್ರಮವನ್ನು ನ. ೯ ರಂದು ನಿಡಗುಂದಿಯ ಡಬ್ಲೂಟಿಪಿ ಘಟಕದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.
ಪಟ್ಟಣದ ಪುರಸಭೆಯ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.೯ ರಂದು ಬೆಳಗ್ಗೆ ೯ ಗಂಟೆಗೆ ಸ್ಥಳೀಯ ವಿವಿಧ ಸ್ವ-ಸಹಾಯ ಸಂಘದಿಂದ ಆಯ್ಕೆ ಮಾಡಲಾದ ೩೦ ಮಹಿಳೆಯರ ತಂಡ, ಪುರಸಭೆಯ ಸದಸ್ಯರನ್ನು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಆಗುವ ನಿಡಗುಂದಿಯ ಡಬ್ಲೂಟಿಪಿ ಘಟಕಕ್ಕೆ ಕರೆದುಕೊಂಡು ಹೋಗಲಾಗುವುದು. ಅಲ್ಲಿ ಮನೆಗಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆಯ ಪ್ರಕ್ರಿಯೆ, ನಾಗರಿಕರು ಉತ್ತಮ ಗುಣಮಟ್ಟದ ನೀರನ್ನು ಪಡೆದುಕೊಳ್ಳಲು ಅನುಸರಿಸುವ ವಿವಿಧ ಪರೀಕ್ಷಾ ಮಾದರಿಯ ಪ್ರಕ್ರಿಯೆಯ ಬಗ್ಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ತಿಳಿಸುವ ಜೊತೆಗೆ ನೀರಿನ ಮೂಲ ಸೌಕರ್ಯದ ಬಗ್ಗೆ ಮಾಲೀಕತ್ವದ ಭಾವನೆಯನ್ನು ಮಹಿಳೆಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ನೀರು ಹೇಗೆ ಶುದ್ಧೀಕರಣ ಮಾಡಲಾಗುತ್ತದೆ. ಇದಕ್ಕೆ ಎಷ್ಟು ವೆಚ್ಚ ತಗಲುತ್ತದೆ ಸೇರಿದಂತೆ ಇತ್ಯಾದಿ ಮಾಹಿತಿಯನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ವ-ಸಹಾಯ ಸಂಘದ ಸದಸ್ಯೆಯರಿಗೆ ತಿಳಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಇವರು ಮಾಹಿತಿ ಪಡೆದುಕೊಂಡ ನಂತರ ಅವರು ಪಟ್ಟಣದ ತಮ್ಮ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ನೀರು ಅಮೂಲ್ಯವಾಗಿರುವ ಕುರಿತು ಜಾಗೃತಿ ಮೂಡಿಸುವ ಜೊತೆಗೆ ನೀರು ಹಿತಮಿತವಾಗಿ ಬಳಕೆ ಮಾಡಬೇಕು. ನೀರನ್ನು ಪೋಲು ಮಾಡದಂತೆ ಜನರಿಗೆ ಜಾಗೃತಿ ಮೂಡಿಸಲು ಈ ಅಭಿಯಾನ ನೆರವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪುರಸಭೆಯ ವ್ಯವಸ್ಥಾಪಕ ವಿರೇಶ ಹಟ್ಟಿ, ಕೆ.ಕೆ.ಕೊಕಡೆ, ಎಲ್.ಐ.ರಾಂಪೂರ, ಎನ್.ಬಿ.ಬಳವಾಟ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment