ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ನವೆಂಬರ್ ೯ ರಂದು ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ ೧೦-೩೦ ಗಂಟೆಯಿಂದ ಪೋಲಿಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಪೊಲೀಸ್ ಇನ್ಸಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸಪೆಕ್ಟರ್-೨(ಮೊ:೯೩೬೪೦೬೨೬೩೯) ದೇವರ ಹಿಪ್ಪರಗಿಯ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡಿವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಕಚೇರಿ ದೂರವಾಣಿ ೦೮೩೫೨-೨೫೫೩೩೩, ೨೫೭೭೮೬ ಹಾಗೂ ೨೯೫೦೭೪ ಸಂಖ್ಯೆಗೆ ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
Related Posts
Add A Comment