ವಿಜಯಪುರ: ಭಾರತ ಸರ್ಕಾರ, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ನವೆಂಬರ್ ೦೮ ರಿಂದ ೧೦ರವರೆಗೆ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-೨೦೪೭, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಉದ್ಘಾಟನಾ ಕಾರ‍್ಯಕ್ರಮವನ್ನು ನವೆಂಬರ್ ೮ರಂದು ಬೆಳಗ್ಗೆ ೧೦:೩೦ಕ್ಕೆ ಏರ್ಪಡಿಸಲಾಗಿದೆ. ವಿಜಯಪುರ ಸಂಸದರಾದ ರಮೇಶ್ ಜಿಗಜಿಣಗಿ ಅವರು ಕರ‍್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭಾಗವಹಿಸಲಿದ್ದು, ವಿವಿಧ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment