ಯಡ್ರಾಮಿ: ತಾಲೂಕು ಕಾಂಗ್ರೆಸ್ ಮುಖಂಡ, ಜೇವರ್ಗಿ ಮತ್ತು ಯಡ್ರಾಮಿ ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ರಾಜಶೇಖರ ಸಾಹು ಸೀರಿ ಅವರನ್ನು ರಾಜ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಬಾಬುಗೌಡ ಪಾಟೀಲ ಕುಳಗೇರಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜಶೇಖರ ಸಾಹು ಸೀರಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಶಾಸಕ ಡಾ|ಅಜಯ್ ಸಿಂಗ್ ಅವರ ಗೆಲುವಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಅಲ್ಲದೇ, ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿ. ಎನ್.ಧರ್ಮಸಿಂಗ್ ಅವರ ನಿಕಟವರ್ತಿಯಾಗಿ ಪಕ್ಷದಲ್ಲಿ ಕೆಲಸ ಮಾಡಿದ್ದಾರೆ. ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗಾಗಿ ಸೀರಿ ಅವರು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಿರುವುದರಿಂದ ಅವರನ್ನು ಯಾವುದಾದರೊಂದು ರಾಜ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
Related Posts
Add A Comment