ವಿಜಯಪುರ: ಇತ್ತಿಚಿಗೆ ತುಮಕೂರಿನಲ್ಲಿ ನಡೆದ 2022-23 ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲೆಯಿಂದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿ ಆಡಲು ಓಡಿಸ್ಸಾ ರಾಜ್ಯದ ಭುವನೇಶ್ವರ ನಗರಕ್ಕೆ ತೆರಳುತ್ತಿರುವ ಜಿಲ್ಲಾ ನೌಕರರ ಸಂಘದ ಖಜಾಂಚಿ ಸೈಯದ್ ಜುಬೇರ ಕೆರೂರ ಅವರಿಗೆ ಮಂಗಳವಾರ ಸಂಜೆ ನೌಕರರ ಭವನದಲ್ಲಿ ಆತ್ಮಿಯವಾಗಿ ಸನ್ಮಾನಿಸಲಾಯಿತು.
ಜಿಲ್ಲಾ ನೌಕರ ಸಂಘದ ಅಧ್ಯಕ್ಷ ಸುರೇಶ ಶಡಶ್ಯಾಳ ಮಾತನಾಡಿ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಆಟದಿಂದ ಗೆಲುವು ಸಾಧಿಸಿ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿ ನಮ್ಮ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಾಷ್ಟ್ರ ಮಟ್ಟದ ಕ್ರೀಡೆಯಲ್ಲೂ ಸಹ ಜುಬೇರ ಕೆರೂರ ಹಾಗೂ ಎ.ಎ.ಜಹಾಗೀರದಾರ ಹಾಕಿ ಕ್ರೀಡಾಪಟುಗಳು ಜಯಶಾಲಿಯಾಗಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಸಿರ್ ನದಾಪ್, ಎಸ್.ಎನ್.ತಡಲಗಿ, ಪಿ.ಎಸ್.ಗದ್ಯಾಳ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

