Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲಿಸಿದ ಜಿಪಂ ಸಿಇಓ ಶಿಂಧೆ
(ರಾಜ್ಯ ) ಜಿಲ್ಲೆ

ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲಿಸಿದ ಜಿಪಂ ಸಿಇಓ ಶಿಂಧೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ ೧೦,೦೦೦ ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.
ಸರಕಾರದಿಂದ ಮಂಜೂರಾದ ೧೦,೦೦೦ ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ ೮ ರಂದು ಓABCONS ಸಂಸ್ಥೆಯಿಂದ ಎಮ್.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, SONNE Infrastructure ಹಾಗೂ ವಿ. ಭರತ, ಯೋಜನಾ ಸಲಹೆಗಾರರು, ಓABCONS ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್, ಬೆಂಗಳೂರು ಮತ್ತು ವಿಜಯಪುರದ ತೋಟಗಾರಿಕೆ ಉಪ ನಿರ್ದೇಶಕರು ಅವರನ್ನೊಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿತು.
ರಾಹುಲ್ ಶಿಂಧೆ ಅವರು ಯೋಜನೆ ರೂಪುರೇಷಗಳನ್ನು ತಯಾರಿಸುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಕಾರ್ಯ ಸಾಧ್ಯತೆ ಹಾಗೂ ನಿರ್ವಹಣಾ ವೆಚ್ಚದ ಸಾಧ್ಯತೆಯ ಬಗ್ಗೆ ಅಧ್ಯಯನ ಮಾಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ ಅಧಿಕ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ಮತ್ತು ಭವಿಷ್ಯದಲ್ಲಿ ಶೀಥಲೀಕರಣದ ಕಟ್ಟಡ ವಿಸ್ತರಣೆಗೆ ಅವಕಾಶವಿರುವಂತೆ ಯೋಜನೆಯನ್ನು ರೂಪಿಸಲು ತಿಳಿಸಿದರು.
ಯೋಜನಾ ಸ್ಥಳದಲ್ಲಿ ೮೦೦ ಕೆವಿ ಸಾಮರ್ಥ್ಯದ ವಿದ್ಯುತ್ ಸೌಲಭ್ಯವನ್ನು ಒದಗಿಸಲು ಇರುವ ಅವಕಾಶಗಳು ಹಾಗೂ ತಗಲುವ ವೆಚ್ಚಗಳ ಕುರಿತು ಯೋಜನಾ ಅಂದಾಜು ತಯಾರಿಸಲು ಹೆಸ್ಕಾಂನ ಸಹಾಯಕ ಅಭಿಯಂತರು ಅವರಿಗೆ ಸೂಚಿಸಿದರು.
ನಿಯೋಜಿತ ಸ್ಥಳಕ್ಕೆ ಅಥಣಿ ರಸ್ತೆಯಿಂದ ಮಹಿಳಾ ವಿಶ್ವ ವಿದ್ಯಾಲಯದ ಹಿಂಭಾಗದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕೂಡುವ ರಸ್ತೆಯ ಮೂಲಕ ಪ್ರವೇಶ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಪಂಚಾಯತ್ ರಾಜ್ ಇಂಜಿನಿಯರಿಂಗ ಇಲಾಖೆಯ ಸಹಾಯಕ ಅಭಿಯಂತರರಿಗೆ ಕ್ರಮ ವಹಿಸಲು ಸೂಚಿಸಿದರು.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರು ಇವರಿಗೆ ಸಂಬಂಧಿಸಿದ ಇಲಾಖೆಗಳಿಂದ ಅಗತ್ಯ ಅನುಮತಿ ಪಡೆದುಕೊಳ್ಳಲು ಹಾಗೂ ಅನುಷ್ಠಾನ ಸಂಸ್ಥೆಗೆ ಬೇಕಾದ ಎಲ್ಲ ಸಹಕಾರವನ್ನು ನೀಡಲು ಸೂಚಿಸಿದರು.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದಲ್ಲಿ ಸರಕಾರದಿಂದ ಮಂಜೂರಾದ ೧೦,೦೦೦ ಮೆಟ್ರಿಕ್ ಟನ್ ಸಾಮರ್ಥ್ಯದ ಅತ್ಯಾಧುನಿಕ ಶೈತ್ಯಾಗೃಹದ ಜೊತೆಗೆ ಕಲರ್ ಸಾರ್ಟಿಂಗ್ ಹಾಗೂ ಗ್ರೇಡಿಂಗ್ ಘಟಕ ನಿರ್ಮಾಣದ ಪ್ರಸ್ತಾವನೆ ಅನುಮೋದನೆಯಾಗಿದ್ದು, ಇದರ ಉದ್ದೇಶ ದ್ರಾಕ್ಷಿ ಹಣ್ಣು ಮತ್ತು ಒಣದ್ರಾಕ್ಷಿಗಳ ಸಂಗ್ರಹಣೆ, ಸಂಸ್ಕರಣೆ, ಸಾಗಣೆಯನ್ನು (ಕೋಲ್ಡ್ ಚೈನ್ ಸೌಲಭ್ಯದೊಂದಿಗೆ) ವೈಜ್ಞಾನಿಕವಾಗಿ ನಿರ್ವಹಿಸಲು ಮತ್ತು ಶೀಥಲೀಕರಿಸಿ ಸರಕು ಸಾಗಾಣಿಕೆ ಒದಗಿಸುವುದಾಗಿದೆ. ಇದರಿಂದ ಜಿಲ್ಲೆಯಲ್ಲಿನ ದ್ರಾಕ್ಷಿ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಸಮಾಲೋಚಕರಾದ ಶರತ್ ವ್ಹಿ, ನಬಾರ್ಡ್ ಸಂಸ್ಥೆಯ ಮುಖ್ಯ ಇಂಜಿನಿಯರ್ ಪ್ರಭಾಕರ ಎಲ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವೈನ್ ಹಾಗೂ ಗ್ರೇಪ್ಸ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಸೋಮು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಿ. ಎಸ್ ಚವ್ಹಾಣ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳಾದ ಗುರುನಾಥ ಪಾಟೀಲ, ನಾಗೇಂದ್ರ ಗುರುನಾಳ, ಸಚಿನ ಉಟಗಿ, ತೊರವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರಾಜಶ್ರೀ ತುಂಗಳ, ಗ್ರಾಮ ಪಂಚಾಯತಿ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.