ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ | ಅರೆಕಾಲಿಕ ಸ್ವಯಂಸೇವಕರಿಗೆ ತರಬೇತಿ | ನ್ಯಾ.ಶಿವಾಜಿ ನಲವಡೆ ಆಶಯ
ವಿಜಯಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಅಸಹಾಯಕರಿಗೆ ಉಚಿತ ಕಾನೂನು ಅರಿವು ಮತ್ತು ನೆರವು ತಲುಪುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಕಾನೂನಿನ ಸೇವೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿ ಜವಾಬ್ದಾರಿಯುತವಾಗಿ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರಧಾನ ಜಿಲ್ಲಾ, ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದ ನ್ಯಾಯಾಂಗ ಅಧಿಕಾರಿಗಳ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ವಿಜಯಪುರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಮತ್ತು ಅರೆಕಾಲಿಕ ಸ್ವಯಂಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯಡಿಯಲ್ಲಿ, ಸಮಾಜದ ದುರ್ಬಲ ವರ್ಗದವರಿಗೆ ಉಚಿತ ಕಾನೂನು ಸೇವೆಗಳ ನೆರವಿನ ಲಭ್ಯತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪ್ರತಿವರ್ಷ ನವೆಂಬರ್ ೦೯ ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತದೆ.
ಜನರಿಗೆ ಕಾನೂನು ತಿಳುವಳಿಕೆ ನೀಡುವುದು ಮತ್ತು ಬಡವರಿಗೆ ಕಾನೂನಿನ ಅರಿವಿನ ಜೊತೆಗೆ ನೆರವು ನೀಡುವ ಉದ್ದೇಶದಿಂದ ಕಾನೂನು ಸೇವೆಗಳ ಕಾಯಿದೆ ಜಾರಿಗೆ ಬಂದಿದ್ದು, ಈಗ ಪ್ರಾಧಿಕಾರವು ಕಾನೂನು ತಿಳುವಳಿಕೆ ನೀಡುವುದು ಮಾತ್ರವಲ್ಲದೆ ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಯಾವ ಸೌಲಭ್ಯಗಳು ಸಿಗುತ್ತಿವೆ ಎಂಬ ಮಾಹಿತಿಗಳನ್ನು ಕೂಡ ಸಾರ್ವಜನಿಕರಿಗೆ ನೀಡಲಾಗುತ್ತಿದೆ. ೧೯೮೭ ರಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ಬಂದ ನಂತರ ಜನರಲ್ಲಿ ಕಾನೂನಿನ ಅರಿವು ಹೆಚ್ಚಾಗಿದೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಜಾತಿ-ಧರ್ಮರಹಿತವಾಗಿ ಕಾನೂನಿನ ನೆರವು ಸಿಗುತ್ತದೆ ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಅವರು ಮಾತನಾಡಿ, ಪ್ರತಿಯೊಬ್ಬರು ಸಮಾಜದ ಬದಲಾವಣೆಯನ್ನು ಬಯಸುವುದರಿಂದ ಸಮಾಜವು
ಈ ಒಂದು ದಿನದ ಕಾರ್ಯಗಾರವನ್ನು ಸದುಪಯೋಗ ಪಡಿಸಿಕೊಂಡು ಜನರಲ್ಲಿ ಕಾನೂನಿನ ಅರಿವು ಮತ್ತು ನೆರವಿನ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಕೆಳವರ್ಗದಲ್ಲಿರುವವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂರ್ಪಸುವಂತೆ ಪ್ರೇರೇಪಿಸಿ, ಮನವರಿಕೆ ಮಾಡಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಜಿಲ್ಲಾ ಕಾನೂನು ಸೇವೆ ಪ್ರಧಿಕಾರ, ಹಿರಿಯ ನ್ಯಾಯವಾದಿಗಳು ಮತ್ತು ಪ್ಯಾನಲ್ ವಕೀಲರಾದ, ಎಂ.ಜಿ.ಭ್ರಂಗಿಮಠ ಅವರು ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅರೆಕಾಲಿಕ ಸ್ವಯಂ ಸೇವಕರು
ಜಿಲ್ಲಾ, ಕಾನೂನು ಸೇವೆಗಳ ಪ್ರಾಧಿಕಾರ, ಮಾನ್ಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಸಂತೋಷ್ ಎಸ್. ಕುಂದರ್ ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಕಾನೂನು ಅರಿವು ಮೂಡಿಸುವುದು ಕಾನೂನು ಸೇವೆಗಳ ಸಮಿತಿ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಗುರಿ ಮತ್ತು ಉದ್ದೇಶಗಳ ಬಗ್ಗೆ ವಿವರಿಸಿದರು. ಸಮಾಜದಲ್ಲಿರುವ ಪ್ರತಿಯೊಬ್ಬ ನಾಗರೀಕರಿಗೆ, ಸಾರ್ವಜನಿಕರಿಗೆ, ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ವಿಶೇಷ ಉಪನ್ಯಾಸಕರಿಂದ ತರಬೇತಿ ಕಾರ್ಯಗಾರ: ಅರೆಕಾಲಿಕ ಕಾನೂನು ಸ್ವಯಂ ಸೇವಕರ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಮಾನಸಿಕ ಅರೋಗ್ಯ ಕಾರ್ಯಕ್ರಮದ ಮಾನಸಿಕ ರೋಗ ತಜ್ಞ ವೈದ್ಯರಾದ ಡಾ. ಮಂಜುನಾಥ ಮಸಳಿ, ಸಿದ್ದೇಶ್ವರ ಕಾನೂನು ಮಹಾವಿದ್ಯಾಲಯ, ಉಪನ್ಯಾಸಕಿ ಸುಷ್ಮಾ ಎಸ್. ದೇಸಾಯಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ, ನ್ಯಾಯವಾದಿ ಕಾವ್ಯ ಎಮ್. ಬಿರಾದಾರ, ಹಿರಿಯ ನ್ಯಾಯವಾದಿ ಎಮ್. ಜಿ. ಮಠಪತಿ, ಅಂಜುಮನ್ ಕಾನೂನು ಮಹಾವಿದ್ಯಾಲಯ ಉಪನ್ಯಾಸಕ ಪ್ರದೀಪಕುಮಾರ ಈ. ಸಂಕದ ಅವರು ಕಾನೂನಿನ ಸೇವೆಗಳ ಪ್ರಾಧಿಕಾರ, ಕಾನೂನಿನ ಅಡಿಯಲ್ಲಿರುವ ಕಾಯ್ದೆ ಕಾನೂನುಗಳು ಹಾಗೂ ಕೌಟುಂಬಿಕ ಕಾನೂನು, ಮಗು ಮತ್ತು ಮನೋವಿಜ್ಞಾನ, ಸಂವಹನ ಕೌಶಲ್ಯಗಳು, ಅಪರಾಧ ನ್ಯಾಯ ವ್ಯವಸ್ಥೆ, ಹೀಗೆ ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಿ, ಚರ್ಚಿಸಿದರು.
ಜಿಲ್ಲಾ ವಕೀಲರ ಸಂಘ ಅಧ್ಯಕ್ಷರಾದ ಐ.ಜಿ.ಚಾಗಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಸೇರಿದಂತೆ ಜಿಲ್ಲಾ ಮಟ್ಟದ ವಕೀಲರು, ನ್ಯಾಯವಾದಿಗಳು, ಕಾನೂನು ಪದವೀಧರ ವಿದ್ಯಾರ್ಥಿಗಳು, ಆಶಾಕಾರ್ಯಕರ್ತೆಯರು, ಶಿಕ್ಷಕರು ಉಪಸ್ಥಿತರಿದ್ದರು.