ಮುದ್ದೇಬಿಹಾಳ: ಭಾರತದ ಪ್ರತಿಯೊಬ್ಬ ಪ್ರಜೆ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸಿ ದುರ್ಬಲ ವ್ಯಕ್ತಿಗಳಿಗೆ ಪ್ರಾಧಿಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸುವದು ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ನಿಂಗಪ್ಪ ಗರಗ ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರೆ ಎಲ್ಲ ಸರಕಾರಿ ಇಲಾಖೆಗಳ ಸಂಯಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕುರಿತು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಯಾವುದೇ ವ್ಯಕ್ತಿಗೆ ಕಾನೂನಿನ ಅವಶ್ಯಕತೆ ಇದ್ದಲ್ಲಿ ಹತ್ತಿರದ ಕಾನೂನು ಸೇವಾ ಸಮಿತಿಗೆ ಭೇಟಿ ನೀಡಿ ಉಚಿತವಾಗಿ ಕಾನೂನಿನ ನೆರವು ಪಡೆದುಕೊಳ್ಳಲು ಅವಕಾಶಗಳನ್ನು ಕಲ್ಪಿಸಲಾಗಿದೆ. ನ್ಯಾಯಾಲಯದ ಪ್ರಕರಣಗಳಲ್ಲಿಯೂ ಉಚಿತ ನೆರವು ಪಡೆದುಕೊಳ್ಳಬಹುದಾಗಿದೆ ಎಂದರು.
ಕಾನೂನು ಸೇವಗಳ ಕುರಿತು ಹಿರಿಯ ನ್ಯಾಯವಾದಿ ಬಿ.ಆರ್.ನಾಡಗೌಡರ ವಿಶೇಶ ಉಪನ್ಯಾಸ ನೀಡಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿದರು. ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸಂಪತ್ತಕುಮಾರ ಬಳೂಲಗಿಡದ, ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಂ.ಆರ್.ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ಶಿಕ್ಷಣ ಸಂಯೋಜಕ ಎಚ್.ಎ.ಮೇಟಿ, ತಾ.ಪಂ ನ ನಿರ್ಮಲಾ ತೋಟದ, ನ್ಯಾಯಾಲಯದ ಸಿಬ್ಬಂದಿಗಳಾದ ಅರವಿಂದ ಕುಂಬಾರ, ವಿಜು ಶಿವಣಗಿ, ಮಹಾಂತೇಶ ಹಚರಡ್ಡಿ, ಇಸಾಕ್ ಒಂಟಿ, ಹಿರಿಯ ಮತ್ತು ಕಿರಿಯ ನ್ಯಾಯವಾದಿಗಳು, ಪಕ್ಷಗಾರರು ಇದ್ದರು.
ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಬಿ.ಗೌಡರ ಕಾರ್ಯಕ್ರಮ ನಿರ್ವಹಿಸಿದರು.
Related Posts
Add A Comment