ಬಸವನಬಾಗೇವಾಡಿ: ಜಗತ್ತಿನಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತ. ನಮ್ಮ ದೇಶದ ಪ್ರತಿಯೊಬ್ಬ ಪ್ರಜೆ ಕಾನೂನು ಅರಿವು ಹೊಂದುವ ಜೊತೆಗೆ ಮೂಲಭೂತ ಹಕ್ಕುಗಳು, ಕರ್ತವ್ಯಗಳ ಬಗ್ಗೆ ಜ್ಞಾನ ಹೊಂದಬೇಕೆಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ನ್ಯಾಯಾಂಗಕ್ಕೆ ಗೌರವ ಸ್ಥಾನವಿದೆ. ಸರಿಯಾದ ಕಾನೂನು ಎಲ್ಲರಿಗೂ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿಯು ಸಮಾಜದ ದುರ್ಬಲ ವರ್ಗದ, ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಉಚಿತ ಕಾನೂನು ಸೇವೆ ಒದಗಿಸುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ವಕೀಲ ವ್ಹಿ.ಬಿ.ಮರ್ತುರ ರಾಷ್ಟ್ರೀಯ ಕಾನೂನು ಸೇವಾ ದಿನ ಹಾಗೂ ಪೋಕ್ಸೋ ಕಾಯ್ದೆ ಕುರಿತು ಮಾತನಾಡಿದರು.
ನ್ಯಾಯವಾದಿ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ಮಾತನಾಡಿದರು. ಡಾ.ಪ್ರಶಾಂತ ಟಿ.ಆರ್.ಸ್ವಾಗತಿಸಿದರು. ಡಾ.ಯುವರಾಜ ಮಾದನಶೆಟ್ಟಿ ನಿರೂಪಿಸಿದರು. ಡಾ.ಎಚ್.ಎಂ.ನಾಟೀಕಾರ ವಂದಿಸಿದರು.
Related Posts
Add A Comment